ಮಂಗಳೂರು: ಪ್ರಚೋದನಾಕಾರಿ ಪೋಸ್ಟ್ ಹಾಕುತ್ತಿದ್ದ ಇನ್ ಸ್ಟಾಗ್ರಾಮ್ ಖಾತೆ ರದ್ದು

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಚೋದನಾಕಾರಿ ಪೋಸ್ಟ್ ಗಳನ್ನು ಮಾಡಲಾಗುತ್ತಿದ್ದ ಸುಮಾರು 1 ಲಕ್ಷದಷ್ಟು ಫಾಲೋವರ್ಸ್ ಇದ್ದ ಇನ್ ಸ್ಟಾಗ್ರಾಮ್ ಖಾತೆಯನ್ನು ರದ್ದುಪಡಿಸಲಾಗಿದೆ.
ಬ್ಯಾರಿ ರೋಯಲ್ ನವಾಬ್ ಎನ್ನುವ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಪ್ರಚೋದನಾಕಾರಿ ಹಾಗೂ ಉದ್ರೇಕಕಾರಿಯಾಗಿರುವಂತಹ ಪೋಸ್ಟ್ ಗಳನ್ನು ಮಾಡಲಾಗುತ್ತಿತ್ತು. ಇದರಿಂದಾಗಿ ಜನರಲ್ಲಿ ಪರಸ್ಪರ ದ್ವೇಷ ಭಾವನೆ ಉಂಟಾಗಲು ಇದು ಕಾರಣವಾಗುತ್ತಿತ್ತು.
ಈ ಇನ್ ಸ್ಟಾಗ್ರಾಮ್ ಖಾತೆಯ ವಿರುದ್ಧ ಬರ್ಕೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಒಟ್ಟು 3 ಪ್ರಕರಣಗಳು ದಾಖಲಾಗಿತ್ತು. ಸದ್ಯ ಈ ಪ್ರಕರಣದ ತನಿಖೆಯನ್ನು ಮಂಗಳೂರು ನಗರ ಸಿಇಎನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: