ನ್ಯಾ.ಎ.ಜೆ.ಸದಾಶಿವ, ಎಚ್.ಕಾಂತರಾಜ್ ಆಯೋಗದ ವರದಿ ಮಂಡಿಸಲು ಮನವಿ

ರಾಜ್ಯ ಸರಕಾರದ ರಚಿಸಿದ್ದ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಮತ್ತು ಎಚ್.ಕಾಂತರಾಜ್ ನೇತೃತ್ವದ ಆಯೋಗದ ವರದಿಯನ್ನು ವಿಧಾನಸಭೆಯ ಪ್ರಸಕ್ತ ಅಧಿವೇಶನದಲ್ಲಿಯೇ ಮಂಡಿಸಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಪರಿಶಿಷ್ಟ ಜಾತಿಗಳ ವರ್ಗೀಕರಣ ಕುರಿತ ಸಚಿವ ಸಂಪುಟದ ಉಪಸಮಿತಿ ಅಧ್ಯಕ್ಷ ಮಾಧುಸ್ವಾಮಿ ಅವರಿಗೆ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟು ಸಂಘ ಸಂಸ್ಥೆಗಳ ಮಹಾ ಒಕ್ಕೂಟ ಮನವಿ ಮಾಡಿದೆ.
ಸಂಪುಟ ಉಪ ಸಮಿತಿಯು ಸರಕಾರಕ್ಕೆ ಯಾವುದೇ ಶಿಫಾರಸು ಮಾಡುವ ಮುನ್ನ ನ್ಯಾ| ಎ.ಜೆ. ಸದಾಶಿವ ಆಯೋಗ ಮತ್ತು ಎಚ್. ಕಾಂತರಾಜ್ ಆಯೋಗದ ವರದಿಗಳನ್ನು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಮಂಡಿಸಿ, ಈ ಬಗ್ಗೆ ಆರೋಗ್ಯ ಪೂರ್ಣ ಸಾರ್ವಜನಿಕ ಚರ್ಚೆ, ಸಮಾಲೋಚನೆ ನಡೆಸಲು ಅವಕಾಶ ಕಲ್ಪಿಸುವಂತೆ ಸರಕಾರಕ್ಕೆ ಕೂಡಲೇ ಶಿಫಾರಸು ಮಾಡಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಮಂಗಳೂರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw