ಮಂಗಳೂರು | ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

police
02/05/2025

ಮಂಗಳೂರು: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ಯುವಕರಿಗೆ  ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ನಡೆದಿದೆ.

ಉಳ್ಳಾಲದ ತೊಕ್ಕೊಟ್ಟು ಒಳಪೇಟೆಗಳಿ ಯುವಕನೊಬ್ಬನಿಗೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ್ದು, ಪರಿಣಾಮವಾಗಿ ಯುವಕನಿಗೆ ಗಾಯಗಳಾಗಿವೆ. ಅಳೇಕಲ ನಿವಾಸಿ ಫೈಝಲ್ ಹಲ್ಲೆಗೊಳಗಾದ ಯುವಕನಾಗಿದ್ದು, ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಘಟನೆಯಲ್ಲಿ ಮಂಗಳೂರು ನಗರದ ಅಡ್ಯಾರ್ ಕಣ್ಣೂರಿನಲ್ಲಿ ಮುಂಜಾನೆ ಯುವಕನೊಬ್ಬನಿಗೆ ಚೂರಿಯಿಂದ ದುಷ್ಕರ್ಮಿಗಳು ಇರಿದಿರುವ ಘಟನೆ ನಡೆದಿದೆ. ನೌಷಾದ್ ಎಂಬ ಯುವಕ ಚೂರಿ ಇರಿತಕ್ಕೊಳಗಾದ ಯುವಕನಾಗಿದ್ದಾನೆ.

ತೊಕ್ಕೊಟ್ಟು ಕಲ್ಲಾಪು ಮಾರ್ಕೆಟ್ ಗೆ ತೆರಳಲು ಮುಂಜಾನೆ 3 ಗಂಟೆಯ ಸುಮಾರಿಗೆ ಈತ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ನಿಂತಿದ್ದ ವೇಳೆ 2 ದ್ವಿಚಕ್ರ ವಾಹನಗಳಲ್ಲಿ ಬಂದ ನಾಲ್ವರು, ನೌಷಾದ್ ನ ಬೆನ್ನಿಗೆ ಇರಿದಿದ್ದಾರೆ. ಈ ವೇಳೆ ತಕ್ಷಣ ಎಚ್ಚೆತ್ತುಕೊಂಡ ನೌಷಾದ್ ಓಡಿ ಹೋಗಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version