7:29 AM Wednesday 15 - October 2025

ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಮಹಿಳೆಯ ಮಂಗಲ್ಯ ಸರ ಅಪಹರಣ

15/03/2022

ಬಂಟ್ವಾಳ: ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯೊಬ್ಬರ ಕತ್ತಿನಿಂದ 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ಬಿ.ಸಿ.ರೋಡ್‌ನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಕೈಕುಂಜೆ ಪೂರ್ವ ಬಡಾವಣೆ ನಿವಾಸಿ ಮಹಿಳೆ ಸುಲೋಚನಾ ಎಂಬವರು ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ. ಇವರಿ ಮನೆಯಿಂದ ಕೈಕುಂಜೆಯಲ್ಲಿರುವ ಮತ್ತೊಂದು ಮನೆಗೆ ಹೋಗಿ ಹೊಲಿಗೆಗೆ ಕೊಟ್ಟ ಬಟ್ಟೆಯನ್ನು ಪಡೆದುಕೊಂಡು ಹಿಂದಿರುಗಿ ಬರುತ್ತಿರುವಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ತನ್ನ ಕುತ್ತಿಗೆಯಲ್ಲಿದ್ದ ಅಂದಾಜು 1 ಲಕ್ಷ ರೂ. ಮೌಲ್ಯದ 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದಾರೆ.

ತಕ್ಷಣ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್ಸ್ ಪೆಕ್ಟರ್ ವಿವೇಕಾನಂದ ಮತ್ತವರ ತಂಡ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

Exit mobile version