ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಆಗಸ್ಟ್ 5ರವರೆಗೆ ನಿಷೇಧಾಜ್ಞೆ ಮುಂದುವರಿಕೆ

night crfew
01/08/2022

ಮಂಗಳೂರಿನಲ್ಲಿ ಸೆಕ್ಷನ್ 144 ಆಗಸ್ಟ್ 5 ರ ಬೆಳಗ್ಗೆ 6 ಗಂಟೆವರೆಗೂ ಮುಂದುವರಿಕೆ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಯ ಹಿನ್ನಲೆಯಲ್ಲಿ ಸೆಕ್ಷನ್ ಜಾರಿಗೊಳಿಸಲಾಗಿತ್ತು.

ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಯಾವುದೇ ಘಟನೆಗಳು ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ: 01-08-2022 ರಂದು ಬೆಳಿಗ್ಗೆ 6 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆಯ ಕಲಂ: 144 ರಂತೆ ಉಲ್ಲೇಖ (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಮಂಗಳೂರು ನಗರವು ಅತೀ ಸೂಕ್ಷ್ಮ ಪ್ರದೇಶವಾಗಿದ್ದು, ಪ್ರಸ್ತುತ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಇದ್ದು, ಸಣ್ಣ ಪುಟ್ಟ ವಿಚಾರಗಳು ಕೂಡಾ ಉದ್ವಿಗ್ನಗೊಂಡು ಯಾವುದೇ ಕ್ಷಣದಲ್ಲೂ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುತ್ತದೆ. ಆದುದರಿಂದ ಮಂಗಳೂರು ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಈಗಾಗಲೇ ಹೊರಡಿಸಿರುವ ನಿಷೇಧಾಜ್ಞೆಯನ್ನು ಆಗಸ್ಟ್ 1 ರ ಬೆಳಿಗ್ಗೆ 6 ಗಂಟೆಯಿಂದ ಆಗಸ್ಟ್ 5 ರ ಬೆಳಿಗ್ಗೆ 6 ಗಂಟೆಯವರೆಗೆ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಮುಂದುವರಿಸುವುದು ಸೂಕ್ತವೆಂದು ನಿರ್ಧರಿಸಿ ಆದೇಶ ಹೊರಡಿಸಲಾಗಿದೆ.

ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು , ತಿರುಗಾಡುವುದನ್ನು ನಿಷೇಧಿಸಲಾಗಿದೆ. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು, ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.

ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ನಿಂದಿಸುವಂತಹ ಅವಹೇಳನಕಾರಿಯಾದಂತಹ ಯಾವುದೇ ಘೋಷಣೆಗಳು, ಭಾಷಣಗಳು ಪಕಟಣೆಗಳು, ಅವಾಚ್ಯ ಶಬ್ದಗಳ ಬಳಿಕೆ, ಪುಚೋದನಾಕಾರಿ ಭಾಷಣ, ಗಾಯನ ಇತ್ಯಾಧಿ ಚಟುವಟಿಕೆಗಳನ್ನು ನಿಷೇಧಿಸಿದೆ.

ಯಾವುದೇ ಖಾಸಗಿ ಜಾತಿ, ಧರ್ಮ, ಕೋಮು,ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಕತೆಗೆ ಭಾದಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ. ಯಾವುದೇ ಖಾಸಗಿ ಕಾರ್ಯಕ್ರಮ, ಸಮಾರಂಭ, ಮೆರವಣಿಯನ್ನು ನಿಷೇಧಿಸಿದೆ.ಈ ನಿಷೇಧಾಜ್ಞೆಯು ಜಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದಿಂದ ಅಥವಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ

Exit mobile version