ಮ್ಯಾನ್ ಹೋಲ್ ಗೆ ಕಾರ್ಮಿಕರನ್ನು ಇಳಿಸಿದರೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ | ಸರ್ಕಾರಕ್ಕೆ ಹೈಕೋರ್ಟ್ ಖಡಕ್ ವಾರ್ನಿಂಗ್ - Mahanayaka

ಮ್ಯಾನ್ ಹೋಲ್ ಗೆ ಕಾರ್ಮಿಕರನ್ನು ಇಳಿಸಿದರೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ | ಸರ್ಕಾರಕ್ಕೆ ಹೈಕೋರ್ಟ್ ಖಡಕ್ ವಾರ್ನಿಂಗ್

03/02/2021

ಬೆಂಗಳೂರು: ಮ್ಯಾನ್ ಹೋಲ್ ಗೆ ಕಾರ್ಮಿಕರನ್ನು ಇಳಿಸಿದರೆ ಗಂಭೀರ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಖಡಕ್ ಎಚ್ಚರಿಕೆಯನ್ನು ನೀಡಿದೆ.

ಕಲಬುರ್ಗಿಯಲ್ಲಿ ಮ್ಯಾನ್ ಹೋಲ್ ಗೆ ಇಳಿದ ಇಬ್ಬರು ಕಾರ್ಮಿಕರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಖಡಕ್ ಎಚ್ಚರಿಕೆಯನ್ನು ನೀಡಿದೆ.

ಮ್ಯಾನ್ ಹೋಲ್ ಗೆ ಇಳಿದು ಕಾರ್ಮಿಕರು ಮೃತಪಡುತ್ತಿರುವ ಪ್ರಕರಣಗಳು ಮರುಕಳಿಸುತ್ತಿರುವುದು ಆತಂಕಕಾರಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವ  ಕೋರ್ಟ್, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಡಿಸಿದೆ.

ಸರ್ಕಾರ ಹೈಕೋರ್ಟ್ ನ ನಿರ್ದೇಶನಗಳನ್ನು ಪಾಲಿಸುತ್ತಿಲ್ಲ, ಕೋರ್ಟ್ ಆದೇಶ ಪಾಲಿಸದಿದ್ದರೆ, ಗಂಭೀರ ಕ್ರಮಕೈಗೊಂಡು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ.

ಇನ್ನೂ ಮ್ಯಾನ್ ಹೋಲ್ ಗೆ ಬಿದ್ದ ಸಾವನ್ನಪ್ಪುತ್ತಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾರ್ಚ್ 1ರೊಳಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ