ಮಾಣಿ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಡಿಕ್ಕಿ ಹೊಡೆದ ಕಾರು ಜಖಂ - Mahanayaka

ಮಾಣಿ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಡಿಕ್ಕಿ ಹೊಡೆದ ಕಾರು ಜಖಂ

mani
30/05/2024


Provided by

ಮಾಣಿ:  ಕಾರೊಂದು  ಸೂರಿಕುಮೇರು ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ರಸ್ತೆಯ ಉದ್ದಕ್ಕೆ ನಿರ್ಮಿಸಿರುವ ಕಬ್ಬಿಣದ ತಡೆಬೇಲಿಗೆ ಡಿಕ್ಕಿ ಹೊಡೆದು ಜಖಂ ಗೊಂಡಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ರಸ್ತೆಗೆ ಉದ್ದವಾಗಿ ಕಾಮಗಾರಿ ನಡೆಸುತ್ತಿರುವ ಕಂಪೆನಿ ತಡೆಗೋಡೆ ನಿರ್ಮಿಸುತ್ತಿದೆ.  ಇಂದು ಬೆಳಗ್ಗಿನ ಜಾವ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು  ಜಖಂಗೊಂಡಿದೆ.

ಇನ್ನೂ ಕಾರು ಡಿಕ್ಕಿ ಹೊಡೆದ ಪರಿಣಾಮ ತಡೆಗೋಡೆ ಕೂಡ ಜಖಂಗೊಂಡಿದ್ದು, ರಸ್ತೆ ತಡೆ ಬೇಲಿಯ ಗುಣಮಟ್ಟದ ಪ್ರಶ್ನೆ ಕೂಡ ಉದ್ಭವವಾಗಿದೆ. ಇನ್ನಷ್ಟು ಗುಣಮಟ್ಟದ ತಡೆಬೇಲಿ ನಿರ್ಮಾಣ ಮಾಡಬೇಕಿದೆ. ಈ ತಡೆಗೋಡೆಗೆ ಯಾವುದಾದರೂ ಬೃಹತ್ ವಾಹನ ಡಿಕ್ಕಿಯಾದರೆ,  ತಡೆಬೇಲಿಯನ್ನು ಸೀಳಿಕೊಂಡು ವಾಹನ ಮುಂದೆ ಹೋಗುವ ಸಾಧ್ಯತೆಗಳಿವೆ ಎನ್ನುವ ಅಭಿಪ್ರಾಯಗಳು ಕೇಳಿ ಬಂದಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ