ಮಣಿಪುರದಲ್ಲಿ ಮತ್ತೆ ಬೆಂಕಿ: ಶಂಕಿತ ಉಗ್ರರಿಂದ ರಾಕೆಟ್ ದಾಳಿ - Mahanayaka
4:28 AM Thursday 16 - October 2025

ಮಣಿಪುರದಲ್ಲಿ ಮತ್ತೆ ಬೆಂಕಿ: ಶಂಕಿತ ಉಗ್ರರಿಂದ ರಾಕೆಟ್ ದಾಳಿ

06/09/2024

ಮಣಿಪುರ ಇನ್ನೂ ತಣ್ಣಗಾಗಿಲ್ಲ. ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ರಾಕೆಟ್ ದಾಳಿ ನಡೆದಿದ್ದು, ಈ ದಾಳಿಯಲ್ಲಿ 2 ಕಟ್ಟಡಗಳಿಗೆ ಹಾನಿ ಉಂಟಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Provided by

ಚುರ್‌ಚಂದಾಪುರ ಜಿಲ್ಲೆಯ ಗುಡ್ಡ ಪ್ರದೇಶದಿಂದ ಜನವಸತಿ ಇರುವ ಟ್ರೋಂಗ್‌ಲಾವೋಬಿ ಪ್ರದೇಶವನ್ನು ಗುರಿಯಾಗಿಸಿಕೊಂಡು ಶಂಕಿತ ಉಗ್ರರು ರಾಕೆಟ್ ದಾಳಿ ನಡೆಸಿದ್ದಾರೆ. 3 ಕಿ.ಮೀ ದೂರ ಹಾರಬರಲ್ಲ ಸಾಮರ್ಥ್ಯದ ಲಾಂಚರ್ ಬಳಸಿ ರಾಕೆಟ್ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಅದೃಷ್ಟವಶಾತ್ ದಾಳಿಯಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ. ಆದರೆ ಸ್ಥಳದಲ್ಲಿದ್ದ ಸಮುದಾಯ ಭವನ ಹಾಗೂ ಖಾಲಿ ಕಟ್ಟಡವೊಂದಕ್ಕೆ ಹಾನಿ ಉಂಟಾಗಿದೆ. ಇದರೊಂದಿಗೆ ಶಂಕಿತ ಉಗ್ರರು ಬಿಷ್ಣುಪುರ ಜಿಲ್ಲೆಯನ್ನು ಗುರಿಯಾಗಿಸಿಕೊಂಡು ಹಲವು ಸುತ್ತಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ ಎನ್ನಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ