ಮಣಿಪುರದಲ್ಲಿ ಕ್ರೂರ ಕೃತ್ಯ ಮಾಡಿದವರಿಗೆ 11 ದಿನ ಪೊಲೀಸ್ ಕಸ್ಟಡಿ - Mahanayaka

ಮಣಿಪುರದಲ್ಲಿ ಕ್ರೂರ ಕೃತ್ಯ ಮಾಡಿದವರಿಗೆ 11 ದಿನ ಪೊಲೀಸ್ ಕಸ್ಟಡಿ

21/07/2023


Provided by

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನ ಪೊಲೀಸ್ ಕಸ್ಟಡಿ ವಿಧಿಸಿದೆ.

ರಾಜಧಾನಿ ಇಂಫಾಲದಿಂದ ಸುಮಾರು 35 ಕಿ.ಮೀ ದೂರದಲ್ಲಿರುವ ಕಾಂಗ್‌ ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಜನರ ಗುಂಪೊಂದು ಮಹಿಳೆಯರನ್ನು ಥಳಿಸಿ ಬೆತ್ತಲೆಗೊಳಿಸಿ ಅವರನ್ನು ಮೆರವಣಿಗೆ ಮಾಡಿದ್ದು ಮಾತ್ರವಲ್ಲದೇ ಸಾಮೂಹಿಕ ಅತ್ಯಾಚಾರವೆಸಗಿದ್ದರು.

ಈ ಭಯಾನಕ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿತ್ತು. ಇದೀಗ ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪ್ರಮುಖ ಆರೋಪಿ ಸೇರಿದಂತೆ ಒಟ್ಟು ನಾಲ್ಕು ಆರೋಪಿಗಳನ್ನು ಬಂಧಿಸಿದ್ದಾರೆ.

ಇಂದು ಈ ನಾಲ್ಕು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ