ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ - Mahanayaka
7:15 AM Friday 12 - September 2025

ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ

10/09/2024

ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ತರಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಕ್ಷಣ ಕ್ಷಣದ ಮಾಹಿತಿ ಸಂಗ್ರಹಕ್ಕೆ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಲಾಗುತ್ತಿದೆ.


Provided by

ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಲಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ ಮರು ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಗಸ್ತು ತಿರುಗಲು ಮತ್ತು ವೈಮಾನಿಕ ಸಮೀಕ್ಷೆ ನಡೆಸಲು ಮಿಲಿಟರಿ ಹೆಲಿಕಾಪ್ಟರ್ ಅನ್ನು ನಿಯೋಜಿಸಲಾಗಿದ್ದು, ಕೂಂಬಿಂಗ್ ಕಾರ್ಯಾಚರಣೆಯೂ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕರು ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ