ಮತ್ತೆ ಗದ್ದಲ: ಹಿಂಸಾಚಾರ ಪೀಡಿತ ಮಣಿಪುರದ ಹಲವು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ

ಹಿಂಸಾಚಾರ ಪೀಡಿತ ಮಣಿಪುರದ ಹಲವು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಅಧಿಕ ಭದ್ರತಾ ಪಡೆ ನಿಯೋಜನೆ ಮಾಡಿರುವುದರ ವಿರುದ್ಧ ಮತ್ತು ರಾಜ್ಯದ ಕಣಿವೆ ಜಿಲ್ಲೆಗಳ ಗಡಿಯಲ್ಲಿ ಕಾವಲು ಕಾಯುತ್ತಿದ್ದ ಗ್ರಾಮ ಸ್ವಯಂಸೇವಕರ ಬಂಧನದ ವಿರುದ್ಧ ಕಣಿವೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂಫಾಲ್‌ನಲ್ಲಿ, ತಂಗ್‌ಮೈಬಾಂಡ್ ಡಿಎಂ ಕಾಲೇಜಿನ ಗೇಟ್‌ನ ಹೊರಗೆ ಧರಣಿ ನಡೆಸಲಾಗಿದೆ. ಇದಲ್ಲದೆ, ಹಲವು ಮಹಿಳಾ ಪ್ರತಿಭಟನಾಕಾರರು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರ ಅಧಿಕೃತ ನಿವಾಸದತ್ತ ಮೆರವಣಿಗೆ ನಡೆಸಿದರು.
ಇಂಫಾಲ್‌ನ ಕಾಂಚಿಪುರದ ಮಣಿಪುರ ವಿಶ್ವವಿದ್ಯಾಲಯದ ಗೇಟ್‌ನಲ್ಲಿ ರ್‍ಯಾಲಿ ನಡೆಸುತ್ತಿದ್ದ ಮಹಿಳೆಯರನ್ನು ಪೊಲೀಸರು ತಡೆದಿದ್ದಾರೆ.
ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ಕರೆದ ಕೆಲವು ದಿನಗಳ ಅನಂತರ ಮಣಿಪುರದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಕಣಿವೆ ಜಿಲ್ಲೆಗಳ ವಿವಿಧೆಡೆ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth