ಬೆಂಬಲಿಗರ ಜೊತೆ ಬಿಜೆಪಿ ಸೇರಿದ ಹಲವು ಮುಖಂಡರು
ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗುರುವಾರ ಹಲವು ಮುಖಂಡರು ಬಿಜೆಪಿ ಸೇರ್ಪಡೆಯಾದರು.
ರಾಯಚೂರು ಜಿಲ್ಲೆಯ ಸಿಂಧನೂರಿನವರಾದ ಕಾಂಗ್ರೆಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಕರಿಯಪ್ಪ, ಚಾಮರಾಜನಗರದವರಾದ ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ಕೋಲಾರ ಶ್ರೀನಿವಾಸಪುರ ನಿವಾಸಿ, ಕಾಂಗ್ರೆಸ್ ಮುಖಂಡ ಮತ್ತು ಸಮಾಜ ಸೇವಕ ಶ್ರೀನಿವಾಸ್ ರೆಡ್ಡಿ ಅವರು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದರು.
ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ, ರಾಜ್ಯ ಸಚಿವರಾದ ಭೈರತಿ ಬಸವರಾಜ್, ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಈ ಮುಖಂಡರು ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























