ಬೈಕ್ ಮೇಲೆ ಮರದ ದಿಮ್ಮಿ ಬಿದ್ದು ನವವಿವಾಹಿತ ಸಾವು: 5 ತಿಂಗಳ ಗರ್ಭಿಣಿ ಪತ್ನಿ ರೋದನೆ - Mahanayaka
12:02 AM Thursday 29 - January 2026

ಬೈಕ್ ಮೇಲೆ ಮರದ ದಿಮ್ಮಿ ಬಿದ್ದು ನವವಿವಾಹಿತ ಸಾವು: 5 ತಿಂಗಳ ಗರ್ಭಿಣಿ ಪತ್ನಿ ರೋದನೆ

mukhesh
22/07/2022

ಬೆಂಗಳೂರು:  ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಬೈಕ್ ಮೇಲೆ ಮಗುಚಿ ಬಿದ್ದ ಪರಿಣಾಮ ನವವಿವಾಹಿತರೊಬ್ಬರು ಮೃತಪಟ್ಟ ಘಟನೆ ನಾಗರಬಾವಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ತಮಿಳುನಾಡು ಮೂಲದ ಮುಖೇಶ್(28) ಮೃತಪಟ್ಟವರು ಎಂದು ಗುರುತಿಸಲಾಗಿದ್ದು,  ಇವರು ಬೆಂಗಳೂರಿನಲ್ಲಿ ವಾಸವಿದ್ದರು.  ತಿರುವಣ್ಣಾಮಲೈನಲ್ಲಿರುವ ತಾಯಿ ಮನೆಗೆ ಹೋಗಿ ತನ್ನ ಸ್ನೇಹಿತ ಡೇವಿಡ್ ಎಂಬವರ ಜೊತೆ ಬೈಕ್ ನಲ್ಲಿ ಹಿಂಬದಿ ಸವಾರನಾಗಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಮರದ ದಿಮ್ಮಿ ಹೊತ್ತು ಸಾಗುತ್ತಿದ್ದ ಲಾರಿ ಬೈಕ್ ಮೇಲೆ ಮಗುಚಿ ಬಿದ್ದಿದ್ದು, ಪರಿಣಾಮವಾಗಿ ಮುಖೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಡೇವಿಡ್ ಗೆ  ಗಂಭೀರ ಗಾಯವಾಗಿದೆ.

ಮೃತ ಮುಖೇಶ್ ಅವರ ಪತ್ನಿ 5 ತಿಂಗಳ ಗರ್ಭಿಣಿಯಾಗಿದ್ದು, ಮಗುವಿನ ನಿರೀಕ್ಷೆಯಲ್ಲಿದ್ದ ಅವರ ಕುಟುಂಬಕ್ಕೆ ಮುಖೇಶ್ ಸಾವಿನ ಸುದ್ದಿ ಬರಸಿಡಿಲಿನಂತೆ ಅಪ್ಪಳಿಸಿದ್ದು, ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ