ಮಾರಕಾಸ್ತ್ರಗಳಿಂದ ಕೊಚ್ಚಿ ಬಜರಂಗದಳದ ಕಾರ್ಯಕರ್ತನ ಬರ್ಬರ ಹತ್ಯೆ! - Mahanayaka
4:35 AM Thursday 15 - January 2026

ಮಾರಕಾಸ್ತ್ರಗಳಿಂದ ಕೊಚ್ಚಿ ಬಜರಂಗದಳದ ಕಾರ್ಯಕರ್ತನ ಬರ್ಬರ ಹತ್ಯೆ!

harsha murder
21/02/2022

ಶಿವಮೊಗ್ಗ: ತಂಡವೊಂದು ಬಜರಂಗದಳದ ಕಾರ್ಯಕರ್ತನೆನ್ನಲಾದ ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಭಾರತಿ ಕಾಲನಿಯಲ್ಲಿ ನಡೆದಿದೆ.

ಹರ್ಷ ಎಂಬ ಯುವಕ ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು  ಪರಿಶೀಲನೆ ನಡೆಸಿದ್ದು,  ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ  ಜನರು ಜಮಾಯಿಸಿದ್ದರು.

ಇನ್ನೂ ಯುವಕನ ಹತ್ಯೆಯನ್ನು ಖಂಡಿಸಿ ಇಂದು ವ್ಯಾಪಕವಾಗಿ ಪ್ರತಿಭಟನೆ ನಡೆಯುತ್ತಿದ್ದು, ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಡಾಪಾವ್ ತಿಂದು ಬಿಲ್ ಪಾವತಿಸದೇ ತೆರಳಿದ್ದ ಕೇಂದ್ರ ಸಚಿವರಿಗೆ ತೀವ್ರ ಮುಜುಗರ!

ಆಮ್ಲೆಟ್​ ಮಾಡಿಕೊಡಲಿಲ್ಲ ಎಂದು ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ

ನಂದಿಬೆಟ್ಟದಿಂದ ಬೆಟ್ಟದಿಂದ ಜಾರಿ ಬಿದ್ದ ಯುವಕ: ಅಗ್ನಿ ಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯ

ಒಂದೇ ಕುಟುಂಬದ ಮೂವರ ಸಜೀವ ದಹನ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಡ್ಯಾನ್ಸ್ ಬಾರ್ ಮೇಲೆ ಸಿಸಿಬಿ ಪೊಲೀಸರ ದಾಳಿ: ಮೂವರ ಆರೋಪಿಗಳ ಬಂಧನ, 28 ಮಹಿಳೆಯರ ರಕ್ಷಣೆ

ಇತ್ತೀಚಿನ ಸುದ್ದಿ