ಮರಕ್ಕೆ ಡಿಕ್ಕಿ ಹೊಡೆದ ಕಾರು:  2 ತಿಂಗಳ ಮಗು ಸಹಿತ 5 ಮಂದಿಯ ದಾರುಣ ಸಾವು - Mahanayaka
6:43 PM Thursday 18 - September 2025

ಮರಕ್ಕೆ ಡಿಕ್ಕಿ ಹೊಡೆದ ಕಾರು:  2 ತಿಂಗಳ ಮಗು ಸಹಿತ 5 ಮಂದಿಯ ದಾರುಣ ಸಾವು

accident
03/01/2023

ಹರ್ಯಾಣ: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 5 ಜನ ಸಾವನ್ನಪ್ಪಿದ ಘಟನೆ ಹರಿಯಾಣದ ಸಿರ್ಸಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. 7 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.


Provided by

ಮೃತರಲ್ಲಿ ಮೂವರು ಮಹಿಳೆಯರು, ಚಾಲಕ ಹಾಗೂ 2 ತಿಂಗಳ ಹೆಣ್ಣು ಮಗು ಸೇರಿದೆ. ಸಂತ್ರಸ್ತರು ಸಿರ್ಸಾದ ಖರಿಯನ್ ಹಳ್ಳಿಯಲ್ಲಿರುವ ಡೇರಾ ಬಾಬಾ ಮುಂಗಾನಾಥ್‌ ಗೆ ಭೇಟಿ ನೀಡಿದ ನಂತರ ಮೆಹ್ನಾ ಖೇರಾಕ್ಕೆ ಮರಳುತ್ತಿದ್ದರು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿರ್ಸಾ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಗಾಯಾಳುಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಬ್ ಇನ್ಸ್‌ ಪೆಕ್ಟರ್ ಕಿಶೋರಿ ಲಾಲ್ ತಿಳಿಸಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದೆ. ಮೆಹನಖೇಡ ಗ್ರಾಮದ ಮಾಜಿ ಸರಪಂಚ್ ಸುಭಾಷ್ ಮೆಹ್ತಾ ಮಾತನಾಡಿ, ‘ಗ್ರಾಮದ ಕೆಲವರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಮನೆಗೆ ಮರಳುತ್ತಿದ್ದಾಗ ವಾಹನ ನಿಯಂತ್ರಣ ತಪ್ಪಿ ಮಾರ್ಗಮಧ್ಯೆ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ