ಕರಾಟೆಯಲ್ಲಿ ಮಿಂಚಿದ ಮರಿಯಮ್ ನಿಕೇತನದ ಶಾಲಾ ವಿದ್ಯಾರ್ಥಿಗಳು
ಮೂಡುಬಿದಿರೆ: ಅ.25ರಂದು SHORIN- -RYU ಕರಾಟೆ ಅಸೋಸಿಯೇಷನ್ ( ರಿ) ಪ್ರಸ್ತುತಪಡಿಸಿದ ಎಂ.ಕೆ.ಅನಂತ್ ರಾಜ್ ಮೆಮೊರಿಯಲ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡುಬಿದಿರೆ ನೇತೃತ್ವದಲ್ಲಿ ಇಲ್ಲಿನ ಸ್ಕೌಟ್ ಗೈಡ್ಸ್ ಭವನದಲ್ಲಿ ನಡೆದ ಎಂಟನೇ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬೆಳುವಾಯಿ ಮರಿಯಮ್ ನಿಕೇತನ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಶಸ್ತಿ ಗೆಲ್ಲುವ ಮೂಲಕ ಸಾಧನೆಗೈದಿದ್ದಾರೆ.
ಈ ಬಗ್ಗೆ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಜೆಸಿಂತ ಲಸ್ರಾದೊ ಅವರು, ಮಕ್ಕಳ ಶ್ರಮ ಮತ್ತು ನಿರಂತರ ಅಭ್ಯಾಸ ಜೊತೆಗೆ ಗುರುಗಳ ಉತ್ಸಾಹ ಮತ್ತು ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಯಿತು ಎಂದು ಹರ್ಷ ವ್ಯಕ್ತಪಡಿಸಿದರು. ಅಲ್ಲದೆ, ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























