ಚುನಾವಣೆ ಬಹಿಷ್ಕಾರ ಪ್ರಕಟಿಸಿದ ಚಾರ್ಮಾಡಿಯ ಮಸಣಗುಡ್ಡೆ ನಿವಾಸಿಗಳು

ಬೆಳ್ತಂಗಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಪ್ರಕಟಿಸಿದ್ದಾರೆ.
ಚಾರ್ಮಾಡಿಯ ಮಸಣ ಗುಡ್ಡೆ, ಗಾಂಧೀನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದರೂ, ಇನ್ನೂ ರಸ್ತೆ ದುರಸ್ತಿಯಾಗಿಲ್ಲ, ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿಲ್ಲ, ಈ ಬಗ್ಗೆ ಭರವಸೆಗಳನ್ನು ಕೇಳಿ ಸಾಕಾಗಿದೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಈ ಪ್ರದೇಶದ ಜನರು ಪ್ರಕಟಿಸಿದ್ದಾರೆ.
ನಮಗೆ ರಸ್ತೆ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಿಕೊಟ್ಟರೆ ಮಾತ್ರ ರಾಜಕಾರಣಿಗಳು ಮತ ಕೇಳಲು ಇಲ್ಲಿಗೆ ಬಂದರೆ ಸಾಕು ಎಂಬುದು ಇಲ್ಲಿನ ಜನರ ಒತ್ತಾಯವಾಗಿದೆ. ಈ ಪ್ರದೇಶದಲ್ಲಿ ಸುಮಾರು 100ರಷ್ಟು ಮನೆಗಳಿವೆ ಪ್ರತಿ ಬೇಸಿಗೆಯಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡಬೇಕಾದ ಸ್ಥಿತಿ ಇಲ್ಲಿನ ನಿವಾಸಿಗಳದ್ದಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw