ಮಸೀದಿಗೆ ಕಲ್ಲೆಸೆತ: ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ಪೊಲೀಸ್ ವಶಕ್ಕೆ - Mahanayaka

ಮಸೀದಿಗೆ ಕಲ್ಲೆಸೆತ: ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ಪೊಲೀಸ್ ವಶಕ್ಕೆ

masjid
13/04/2021

ಸುರತ್ಕಲ್:  ಮಸೀದಿಗೆ ಕಲ್ಲೆಸೆದು ಕಿಟಕಿ ಗಾಜುಗಳನ್ನು ಪುಡಿಗಟ್ಟಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಏಪ್ರಿಲ್ 4ರಂದು  ಮುಂಜಾನೆ 2:40ರ ವೇಳೆಗೆ ಆರೋಪಿಗಳು ಮಸೀದಿಗೆ ಕಲ್ಲೆಸೆದು ಪರಾರಿಯಾಗಿದ್ದರು.


Provided by

ಆರೋಪಿಗಳನ್ನು ಶೀಘ್ರ ಪತ್ತೆ ಮಾಡುವಂತೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಸುರತ್ಕಲ್ ನಿರೀಕ್ಷಕ ಮತ್ತು ಉಪ ನಿರೀಕ್ಷಕರ ನೇತೃತ್ವದ ತನಿಖಾ ತಂಡಕ್ಕೆ ಆದೇಶಿಸಿದ್ದರು. ಮಸೀದಿ ಹಾಗೂ ಸುರತ್ಕಲ್ ಠಾಣಾ ವ್ಯಾಪ್ತಿಯ ಇಡ್ಯಾ ಜನತಾ ಕಾಲೋನಿಯ ಪರಿಸರದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಮೂಲಕ ಸಿಕ್ಕ ಸುಳಿವು ಆಧಾರಿಸಿ ಆರೋಪಿಗಳ ಮಾಹಿತಿ ಕಲೆಹಾಕಿದ ತನಿಖಾ ತಂಡಕ್ಕೆ ಬಾಲಕರ ಸುಳಿವು ಲಭ್ಯವಾಗಿತ್ತು.

ಕುಕೃತ್ಯಕ್ಕೆ ಬಳಸಿದ ಬೈಕ್ ನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಬಾಲಕರನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ. ಇವರ ಕುಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು, ಈ ಆಧಾರ ಆರೋಪಿಗಳ ಬಂಧನಕ್ಕೆ ಸಹಕಾರಿಯಾಗಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ