3:04 AM Wednesday 15 - October 2025

ಬೊಮ್ಮಾಯಿಯವರೇ ನೆನಪಿರಲಿ,  ಮಸಿ ಬಳಿದದ್ದು ರಾಜ್ಯ ಸರ್ಕಾರದ ಮುಖಕ್ಕೆ: ಸಿದ್ದರಾಮಯ್ಯ ಕಿಡಿ

siddaramaiha
30/05/2022

ಬೆಂಗಳೂರು:  ಇಂದು ಬೆಂಗಳೂರಿನಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ  ರೈತ ನಾಯಕ‌ ರಾಕೇಶ್ ಟಿಕಾಯತ್ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಖಂಡನೀಯ ದುಷ್ಕೃತ್ಯ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನೆನಪಿರಲಿ, ಈ ಗೂಂಡಾಗಳು ಮಸಿ ಬಳಿದಿರುವುದು ರಾಜ್ಯ ಸರ್ಕಾರದ ಮುಖಕ್ಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟದಿದ್ದರೆ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂರುವ ನೈತಿಕತೆ ನಿಮಗಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.

ಘಟನೆಯ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ದಾಳಿ ನಡೆಸಿದ ಅವರು,  ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ದೈಹಿಕ ಹಲ್ಲೆ, ಭಿನ್ನಾಭಿಪ್ರಾಯವನ್ನು ಸಿದ್ದಾಂತದ ಮೂಲಕ ಎದುರಿಸಲಾಗದ, ಬಿಜೆಪಿ ಮತ್ತು ಬೆಂಬಲಿಗರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸಹನೆ-ಸಜ್ಜನಿಕೆಗೆ ಹೆಸರಾದ ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಕಿಡಿಕಾರಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನೆಟ್‌ಫ್ಲಿಕ್ಸ್ ರಷ್ಯಾದಲ್ಲಿ ಪ್ರಸಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ

ನವಜಾತ ಶಿಶುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!: ವೈದ್ಯರಿಗೇ ಶಾಕ್

ರಣರಂಗವಾದ ರೈತ ಮುಖಂಡರ ಸಭೆ: ರೈತ ಮುಖಂಡ ಟಿಕಾಯತ್ ಮೇಲೆ ಹಲ್ಲೆ, ಮಸಿ ಎರಚಿದ ಕಿಡಿಗೇಡಿ

ಮಂಗಳೂರಿನ ಬೀಚ್ ನಲ್ಲಿ ನೀರುಪಾಲಾಗಿ ಮೈಸೂರಿನ ಇಬ್ಬರು ಸಾವು

ಇತ್ತೀಚಿನ ಸುದ್ದಿ

Exit mobile version