ಮಾಸ್ಕ್ ಹಾಕದ ಬಿಜೆಪಿ ಶಾಸಕಗೆ ದಂಡ ವಿಧಿಸಿದ ಬೆಂಗಳೂರು ಪೊಲೀಸರು
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಆಡಳಿತ ಪಕ್ಷವಾದ ಬಿಜೆಪಿಯ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೂ ಪೊಲೀಸರು ದಂಡ ವಿಧಿಸಿದ್ದು, ಅವರು ರಾಜ್ಯ ಗೃಹ ಸಚಿವರಿಗೆ ಈ ಬಗ್ಗೆ ದೂರು ನೀಡಿದ್ದಾರೆ.
ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಇಂದು ಮಧ್ಯಾಹ್ನ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಪೊಲೀಸರು 250 ರೂ. ದಂಡ ವಿಧಿಸಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂ.ಪಿ.ಕುಮಾರಸ್ವಾಮಿ ಮಾಸ್ಕ್ ಧರಿಸದ ಹಿನ್ನೆಲೆಯಲ್ಲಿ ಪೊಲೀಸರು ದಂಡ ವಿಧಿಸಿದ್ದಾರೆ. ನೈಟ್ ಕರ್ಫ್ಯೂ ವಾಪಸ್ ಪಡೆದ ಸಿಎಂ ಯಡಿಯೂರಪ್ಪ
ಬಾಡಿಗೆ ಕಾರೊಂದರಲ್ಲಿ ಎಂ.ಪಿ.ಕುಮಾರಸ್ವಾಮಿ ಅವರು ಶೇಷಾದ್ರಿಪುರಂನಿಂದ ಶಾಸಕರ ಭವನಕ್ಕೆ ತೆರಳುತ್ತಿದ್ದರು. ಟ್ರಾಫಿಕ್ ನಲ್ಲಿ ಕಾರು ನಿಂತಿದ್ದ ವೇಳೆ ಪೊಲೀಸರು ಕಾರಿನ ಗ್ಲಾಸ್ ಇಳಿಸುವಂತೆ ಹೇಳಿದ್ದಾರೆ. ಈ ವೇಳೆ ಅವರು ಮಾಸ್ಕ್ ಧರಿಸಿರಲಿಲ್ಲ ಎಂದು ಪೊಲೀಸರು ದಂಡ ವಿಧಿಸಿದ್ದಾರೆ.
ತಾನು ಮಾಸ್ಕ್ ಧರಿಸಿದ್ದರೂ ಪೊಲೀಸರು ತನಗೆ ದಂಡ ವಿಧಿಸಿದ್ದಾರೆ ಎಂದು ಬಿಜೆಪಿ ಶಾಸಕ ಎಂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.