ಮಾಸ್ಕ್  ಕಡ್ಡಾಯಗೊಳಿಸಿದ ಸರ್ಕಾರ:  ಮಾಸ್ಕ್ ಧರಿಸದಿದ್ರೆ ದಂಡ ಹಾಕ್ತಾರಾ? - Mahanayaka
10:44 PM Thursday 16 - October 2025

ಮಾಸ್ಕ್  ಕಡ್ಡಾಯಗೊಳಿಸಿದ ಸರ್ಕಾರ:  ಮಾಸ್ಕ್ ಧರಿಸದಿದ್ರೆ ದಂಡ ಹಾಕ್ತಾರಾ?

mask
25/04/2022

ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಾಸ್ಕ್ ಕಡ್ಡಾಯ ಮಾಡಿದ್ದು, ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.


Provided by

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಪರಿಶೀಲನಾ ಸಭೆಯ  ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಸುಧಾಕರ್, ಕೋವಿಡ್ ನಾಲ್ಕನೇ ಅಲೆ ಬರಬಹುದೆಂಬ ಸಾಧ್ಯತೆ ಹಿನ್ನೆಲೆಯನ್ನು ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದೇವೆ. ಪ್ರಮುಖವಾಗಿ ಕೆಲವು ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು ಎಂದು ಹೇಳಿದರು.

ಸಾಮಾಜಿಕ ಅಂತರ ಪಾಲನೆ ಕಟ್ಟುನಿಟ್ಟಾಗಿ ಪಾಲಿಸಲು , ಕಡ್ಡಾಯವಾಗಿ ಮಾಸ್ಕ್​ ಧರಿಸಲು ಮಾರ್ಗಸೂಚಿ ಹೊರಡಿಸುತ್ತೇವೆ. ಸದ್ಯಕ್ಕೆ ದಂಡ ವಿಧಿಸಲ್ಲ ಅದನ್ನ ಮುಂದಿನ ದಿನಗಳಲ್ಲಿ ಪರಿಶೀಲಿಸಿ ನಿರ್ಧರಿಸಲಾಗುತ್ತದೆ ಎಂದರು.

ಪ್ರಧಾನಿ ಸಭೆ ಬಳಿಕ ಮತ್ತೊಂದು ಸಭೆ ಸೇರಿ,  ಪ್ರಧಾನ ಮಂತ್ರಿ ನೀಡುವ ನಿರ್ದೇಶನಗಳನ್ನು ಆಧರಿಸಿ ಮುಂದಿನ ನಡೆಯ ಬಗ್ಗೆ ತೀರ್ಮಾನಿಸಲಾಗುವುದು ಎಂದು ಇದೇ ವೇಳೆ ಸಚಿವರು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಾಲಗಾರರ ಹೆಸರು ವಾಟ್ಸಾಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ

ಹುಟ್ಟುಹಬ್ಬಕ್ಕೆ ಪ್ರೇಯಸಿಯನ್ನು ಕರೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯಕರ

ಬುಲ್ಡೋಜರ್ ನಿಂದ ಎಟಿಎಂ ಧ್ವಂಸಗೊಳಿಸಿ ಹಣದೋಚಿದ ಕಳ್ಳರು:  ಕಳ್ಳರಿಗೆ ಮಾದರಿಯಾಯ್ತೆ ಬುಲ್ಡೋಜರ್ ಕಾರ್ಯಾಚರಣೆ!

ಮಹತ್ವ ಕಳೆದುಕೊಂಡ ನಿಷೇಧ ಅಭಿಯಾನಗಳು:  ಕೆಲವರ ಪ್ರಚಾರಕ್ಕಾಗಿ ನಡೆಯಿತೇ ನಿಷೇಧ ಅಭಿಯಾನ?

ಇತ್ತೀಚಿನ ಸುದ್ದಿ