ದುರಂತ: ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ದಿಢೀರನೇ ಹೊತ್ತಿಕೊಂಡ ಬೆಂಕಿಯು ಅತಿ ವೇಗದಲ್ಲಿ ಶ್ರೀ ಕೆಮಿಕಲ್ ಕಂಪನಿಗೆ ಹರಡಿತು. ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದ್ದರೂ, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.
ಪಾಲ್ಘರ್ ಜಿಲ್ಲೆಯ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ (ಎಂಐಡಿಸಿ) ತಾರಾಪುರ ಬಳಿ ಈ ಘಟನೆ ನಡೆದಿದೆ.
ಸ್ಥಳೀಯ ಅಧಿಕಾರಿಗಳ ಪ್ರಕಾರ, ಬೆಂಕಿಯನ್ನು ನಿಯಂತ್ರಿಸಲು ನಾಲ್ಕು ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ಡ್ರೋನ್ ದೃಶ್ಯಾವಳಿಗಳು ಕಾರ್ಖಾನೆಯಿಂದ ದಟ್ಟವಾದ ಹೊಗೆ ಏರುತ್ತಿರುವ ಆತಂಕಕಾರಿ ದೃಶ್ಯಗಳನ್ನು ಸೆರೆಹಿಡಿದಿದ್ದು, ಬೆಂಕಿಯು ಕಟ್ಟಡವನ್ನು ಆವರಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj