10:09 AM Saturday 23 - August 2025

ಗೋರೆಗಾಂವ್ ಕಟ್ಟಡದಲ್ಲಿ ಅಗ್ನಿ ಅವಘಡ: 7 ಮಂದಿ ಸಾವು, 39 ಮಂದಿಗೆ ಗಾಯ

06/10/2023

ಮುಂಬೈನ ಗೋರೆಗಾಂವ್ ನ ಐದು ಅಂತಸ್ತಿನ ಕಟ್ಟಡದಲ್ಲಿ ಶುಕ್ರವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದಾರೆ. 39 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಜಾದ್ ಮೈದಾನದ ಬಳಿಯ ಎಂಜಿ ರಸ್ತೆಯಲ್ಲಿರುವ ಜಯ್ ಭವಾನಿ ಕಟ್ಟಡದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಸಂಭವಿಸಿದ ಬೆಂಕಿಯಿಂದ 46 ಜನರನ್ನು ರಕ್ಷಿಸಲಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. ಈ ಬೆಂಕಿಯನ್ನು ಹಂತ 2 ಎಂದು ವರ್ಗೀಕರಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಎಚ್ ಬಿಟಿ ಮತ್ತು ಕೂಪರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version