ಕೋಲ್ಕತ್ತಾ ಏರ್ ಪೋರ್ಟ್ ನಲ್ಲಿ ಭಾರಿ ಅಗ್ನಿ ಅವಘಡ

ಕೋಲ್ಕತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಇದೀಗ ಮೂರು ಅಗ್ನಿಶಾಮಕ ವಾಹನಗಳು ಬಂದು ಕಾರ್ಯಾಚರಣೆ ಮಾಡುತ್ತಿದೆ. ವಿಮಾನ ನಿಲ್ದಾಣದ ಒಳಗಡೆಯ ಬೆಂಕಿಯ ವೀಡಿಯೊ ಕೂಡ ಆನ್ ಲೈನ್ ನಲ್ಲಿ ಕಾಣಿಸಿಕೊಂಡಿದೆ.
ವರದಿಗಳ ಪ್ರಕಾರ ರಾತ್ರಿ 9.20 ರ ಸುಮಾರಿಗೆ ನಿರ್ಗಮನ ವಿಭಾಗದ ಚೆಕ್-ಇನ್ ಕೌಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈ ಘಟನೆಯಿಂದಾಗಿ ನಿರ್ಗಮನದ ಬಾಗಿಲನ್ನು ಮುಚ್ಚಲಾಗಿದೆ ಎಂದು ವರದಿಯಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಇನ್ನು ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ನಂತರ ಅಧಿಕಾರಿಗಳು ಜನರನ್ನು ಸ್ಥಳದಿಂದ ಸ್ಥಳಾಂತರಿಸಿದರು. ಬೆಂಕಿ ಈಗ ನಿಯಂತ್ರಣದಲ್ಲಿದೆ ಎಂಬ ಮಾಹಿತಿ ಸಿಕ್ಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw