ಭಾರೀ ಪ್ರಮಾಣದ ಭೂ ಕುಸಿತ: ಕುಸಿಯುವ ಭೀತಿಯಲ್ಲಿ ಮನೆ

26/06/2025
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ–ಮಳೆ ಅಬ್ಬರ ಮುಂದುವರಿದಿದೆ ಕೊಪ್ಪ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ.
ಕೊಪ್ಪ ತಾಲೂಕಿನ ಹುತ್ತಿನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಸಚಿನ್ ಎಂಬುವರ ಮನೆ ಕುಸಿಯುವ ಆತಂಕ ಸೃಷ್ಟಿಯಾಗಿದೆ. ಮನೆ ಪಕ್ಕದಲ್ಲೇ ಧರೆ ಕುಸಿಯುತ್ತಿದ್ದು, ಕುಸಿಯುತ್ತಿರೋ ಪ್ರಮಾಣ ಹೆಚ್ಚಳವಾಗುತ್ತಿದ್ದು, ಮತ್ತಷ್ಟು ಕುಸಿದರೆ ಮನೆಯೇ ಕೊಚ್ಚಿ ಹೋಗುವ ಸಾಧ್ಯತೆ ಇದೆ.
ಭೂಕುಸಿತದ ವಿಷಯ ತಿಳಿಸಿದರೂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಮನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರಂತರ ಮಳೆ–ಗಾಳಿಗೆ ಮಲೆನಾಡು ಹೈರಾಣಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: