ಭರ್ಜರಿ ಕಾರ್ಯಾಚರಣೆ: ಇಬ್ಬರು ದರೋಡೆಕೋರರ ಬಂಧನ

21/01/2025
ಚಿಕ್ಕಮಗಳೂರು : ಕಾಫಿನಾಡ ಖಾಕಿ ಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 25 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸರ ಕಾರ್ಯಾಚರಣೆ ನಡೆಸಿ, ಮಹಮದ್ ಕಬೀರ್, ಯೂಸೂಫ್ ಪಾಷಾ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
2020ರ ಜುಲೈ ತಿಂಗಳಿನಲ್ಲಿ ಕೇಸರಿ ಜ್ಯುವೆಲರಿ ಶಾಪ್ ದರೋಡೆ ಮಾಡಿದ್ದರು. ಬಳಿಕ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದರು.
ಬಂಧಿತರ ಪೈಕಿ ಕಬೀರ್ 12 ಮನೆಗಳಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದು, 5 ಜಿಲ್ಲೆಯ ಪೊಲೀಸರಿಗೆ ಬೇಕಿದ್ದ. ಮೂಲತಃ ಚಿಕ್ಕಮಗಳೂರಿನ ಕಬೀರ್ ಬೆಂಗಳೂರಿನ ಆರ್.ಟಿ.ನಗರದಲ್ಲಿ ವಾಸ ಮಾಡುತ್ತಿದ್ದ. ಯೂಸೂಫ್ ಪಾಷಾ ಬೆಂಗಳೂರಿನ ಡಿ.ಜೆ. ಹಳ್ಳಿ ನಿವಾಸಿಯಾಗಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: