ವಾಲ್ಮೀಕಿ ನಿಗಮದಲ್ಲಿ ಭಾರೀ ಹಗರಣ ಪ್ರಕರಣ: ಇಬ್ಬರು ಹಿರಿಯ ಅಧಿಕಾರಿಗಳ ಬಂಧನ
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಕೋಟ್ಯಂತರ ರೂಪಾಯಿ ಹಗರಣದ ತನಿಖೆ ಚುರುಕಾಗಿದ್ದು, ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಪದ್ಮನಾಭ್ ಮತ್ತು ಪರುಶುರಾಮ್ ಬಂಧಿತ ಆರೋಪಿ ಅಧಿಕಾರಿಗಳಾಗಿದ್ದು, ಈ ಹಗರಣ ಬೆಳಕಿಗೆ ಬಂದ ನಂತರ ವಾಲ್ಮೀಕಿ ನಿಗಮದ ಅಧಿಕಾರಿಗಳು ನಾಪತ್ತೆಯಾಗಿದ್ದರು. ನಿನ್ನೆ ರಾತ್ರಿ ಇಬ್ಬರು ಅಧಿಕಾರಿಗಳನ್ನು ಬೆಂಗಳೂರು ಹೊರವಲಯದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಎಸ್ ಐಟಿ ತಂಡ ಬಂಧಿತ ಅಧಿಕಾರಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಬಳಿಕ ಎಸ್ ಐಟಿ ಕಸ್ಟಡಿಗೆ ಅಧಿಕಾರಿಗಳನ್ನು ಪಡೆಯಲು ಸಿದ್ಧತೆ ನಡೆಸಲಾಗಿದೆ.
ವಾಲ್ಮೀಕಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರ್ ಅವರು ಸಾವಿಗೆ ಶರಣಾಗಿದ್ದರು. ಅವರು ಬರೆದಿದ್ದ ಡೆತ್ ನೋಟ್ ಹಿನ್ನೆಲೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ತನಿಖೆಗೆ ವಹಿಸಿತ್ತು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕೃತ ಬ್ಯಾಂಕ್ ಖಾತೆಯಿಂದ ಆರ್ ಬಿಎಲ್ ಬ್ಯಾಂಕ್ ನಲ್ಲಿರುವ 10 ಖಾಸಗಿ ಕಂಪೆನಿಗಳು ಮತ್ತು 8 ವ್ಯಕ್ತಿಗಳ ಖಾತೆಗಳಿಗೆ 89.62 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97




























