1:01 AM Sunday 14 - September 2025

ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ: ಲೋಕಸಭೆಯ ಸದಸ್ಯರ ಪೀಠಕ್ಕೆ ನುಗ್ಗಿದ್ದ ಇಬ್ಬರು ಯುವಕರು!

parlement
13/12/2023

ನವದೆಹಲಿ: ಬುಧವಾರ ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ ನಡೆದಿದ್ದು, ಇಬ್ಬರು ವ್ಯಕ್ತಿಗಳು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಓಡಾಡಿದ ಘಟನೆ ನಡೆದಿದೆ.

ಇದರಿಂದ ಗೊಂದಲದ ವಾತಾವರಣ ಉಂಟಾಗಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸಂದರ್ಶಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್ ಗೆ ಜಿಗಿದು ಬೆಂಚುಗಳ ಮೇಲೆ ಘೋಷಣೆ ಕೂಗುತ್ತಾ ಇಬ್ಬರು ಹಾರುತ್ತಿರುವುದು ಕಂಡುಬಂದಿತು.

ಕೂಡಲೇ ಇಬ್ಬರು ವ್ಯಕ್ತಿಗಳ ಮೇಲೆ ಅಲ್ಲಿದ್ದ ಲೋಕಸಭಾ ಸದಸ್ಯರು ನಿಯಂತ್ರಿಸಲು ಹೋಗಿ ಸಿಬ್ಬಂದಿ ಮೇಲೆಯೂ ಹಲ್ಲೆ ನಡೆದಿದೆ. ಲೋಕಸಭಾಧ್ಯಕ್ಷರ ಸ್ಥಾನದಲ್ಲಿದ್ದ ಬಿಜೆಪಿ ಸದಸ್ಯ ರಾಜೇಂದ್ರ ಅಗರವಾಲ್ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಇತ್ತೀಚಿನ ಸುದ್ದಿ

Exit mobile version