ಮತ ಎಣಿಕೆ ವೇಳೆ ಚುನಾವಣಾಧಿಕಾರಿ ಹೃದಯಾಘಾತದಿಂದ ಸಾವು - Mahanayaka
2:30 PM Thursday 16 - January 2025

ಮತ ಎಣಿಕೆ ವೇಳೆ ಚುನಾವಣಾಧಿಕಾರಿ ಹೃದಯಾಘಾತದಿಂದ ಸಾವು

30/12/2020

ಮೈಸೂರು: ಕರ್ತವ್ಯದಲ್ಲಿದ್ದ ಚುನಾವಣಾಧಿಕಾರಿಯೊಬ್ಬರು ಹೃದಯಾಘಾತದಿಂದ ಮತ ಎಣಿಕಾ ಕೇಂದ್ರದಲ್ಲಿಯೇ ಮೃತಪಟ್ಟ ಘಟನೆ ಮೈಸೂರಿನ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ನಡೆದಿದೆ.

ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಆಗಿದ್ದ ಬೋರೇಗೌಡ(52)  ಎನ್.ಶೆಟ್ಟಹಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಅಧಿಕಾರಿಯಾಗಿ ನೇಮಕವಾಗಿದ್ದರು. ಮತ ಎಣಿಕೆ  ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.


ADS

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೋರೇ ಗೌಡರು ಅಸ್ವಸ್ಥರಾಗಿದ್ದು, ತೀವ್ರ ಎದೆನೋವಿನಿಂದ ಬಳಲಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅವರು ನಿಧನರಾಗಿದ್ದಾರೆ.

ಇತ್ತೀಚಿನ ಸುದ್ದಿ