ಮತ ಎಣಿಕೆ ಕೇಂದ್ರ ಎದುರು ನೆರೆದ ಸಾವಿರಾರು ಜನ | ಅಷ್ಟಕ್ಕೂ ಅಲ್ಲಿ ನಡೆದದ್ದೇನು?
ಚಿತ್ರದುರ್ಗ: ಗ್ರಾಮಪಂಚಾಯತ್ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದ ವೇಳೆ ಮತ ಎಣಿಕೆ ಕೇಂದ್ರದ ಆವರಣದಲ್ಲಿ ಸಾವಿರಾರು ಸಂಖ್ಯೆಯ ಜನರು ಜಮಾಯಿಸಿದ ಘಟನೆ ನಡೆದಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಅಭ್ಯರ್ಥಿಗಳ ಏಜಂಟರಿಗೆ ಮಾತ್ರ ಮತ ಎಣಿಕೆ ಕೇಂದ್ರಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರದ ಹೊರ ಭಾಗದಲ್ಲಿ ಶಾಮಿಯಾನ ಹಾಕಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ನಡೆಯುತ್ತಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಜಂಟರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.
ಈ ಮತ ಎಣಿಕಾ ಕೇಂದ್ರದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದು, ಕೇಂದ್ರದ ಸುತ್ತ ನಿಷೇಧಾಜ್ಞೆ ಇದ್ದರೂ, ಸಾವಿರಾರು ಜನರು ಸೇರಿದ್ದು, ಜನರನ್ನು ನಿಯಂತ್ರಿಸಲು ಕಷ್ಟಕರವಾಗಿದೆ. ಇನ್ನೂ ಮತ ಎಣಿಕೆಯ ವಿವರಗಳನ್ನು ಧ್ವನಿವರ್ಧಕಗಳ ಮೂಲಕ ಜನರಿಗೆ ತಿಳಿಸಲಾಗುತ್ತಿದೆ.
ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಜೆ 6ರ ವೇಳೆಗೆ ಅಂತಿಮ ಫಲಿತಾಂಶ ಹೊರ ಬೀಳಬಹುದು.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.