5:01 AM Thursday 10 - September 2026

ಮಠದ ಸ್ನಾನದ ಗೃಹದಲ್ಲಿ ಸ್ವಾಮೀಜಿಯ ಅನುಮಾನಾಸ್ಪದ ಸಾವು!

jnana bhaskara swamiji
17/06/2022

ಚಿತ್ರದುರ್ಗ: ವಿಶ್ವಕರ್ಮ ಸಮಾಜದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಜ್ಞಾನಭಾಸ್ಕರ ಸ್ವಾಮೀಜಿ ಮಠದ ಸ್ನಾನದ ಗೃಹದಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾ ಮಠದಲ್ಲಿ ಇಂದು ಬೆಳಗ್ಗೆ ಸ್ನಾನದ ಗೃಹದಲ್ಲಿ ಅವರ ಮೃತದೇಹ ಕಂಡುಬಂದಿದ್ದು, ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ್ಞಾನಭಾಸ್ಕರ ಸ್ವಾಮೀಜಿ ವಿಶ್ವಕರ್ಮ ಸಮಾಜದ ಒಕ್ಕೂಟದಲ್ಲಿರುವ 63 ಸ್ವಾಮೀಜಿಗಳಲ್ಲಿ ಇವರು ಒಬ್ಬರಾಗಿದ್ದಾರೆ. 30 ವರ್ಷಗಳ ಹಿಂದೆ ಜ್ಞಾನಭಾಸ್ಕರ ಸ್ವಾಮೀಜಿ ಸಂಸಾರ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು.

ವರದಿಗಳ ಪ್ರಕಾರ, ಗುರುವಾರ ಬೆಳಗ್ಗೆ ಶ್ರೀಗಳು ಸ್ನಾನಕ್ಕೆ ಹೋದ ವೇಳೆ ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ.

ಶ್ರೀಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಭಕ್ತರು ಜಮಾಯಿಸಿದ್ದಾರೆ. 30 ವರ್ಷಗಳ ಹಿಂದೆಯೇ ಜ್ಞಾನಭಾಸ್ಕರ ಸ್ವಾಮೀಜಿ ಸಂಸಾರ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು. ಇವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಗುವಿಗೆ ಅರಿಶಿಣ ಕುಂಕುಮ ಬಲವಂತವಾಗಿ ತಿನ್ನಿಸಿದ ತಂದೆ: ಬಾಲಕಿಯ ಸ್ಥಿತಿ ಚಿಂತಾಜನಕ

ಮದುವೆಗೆ ತೆರಳುತ್ತಿದ್ದವರ ದುರಂತ ಸಾವು: ಭೀಕರ ಅಪಘಾತಕ್ಕೆ 7 ಬಲಿ

500 ರೂಪಾಯಿ ತೆಗೆದರೆ 2,500 ರೂ. ಕೊಡ್ತಿದ್ದ ಎಟಿಎಂ: ಎಟಿಎಂ ಕೇಂದ್ರದ ಮುಂದೆ ಜನವೋ ಜನ!

ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದ ಕಾಂಗ್ರೆಸ್ ನಾಯಕಿ

104  ಗಂಟೆಗಳ ಕಾರ್ಯಾಚರಣೆ ಬಳಿಕ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನ ರಕ್ಷಣೆ

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version