4:29 AM Thursday 16 - October 2025

ಮತಾಂತರ ನಿಷೇಧ ಮಸೂದೆ: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಡೆದ ಚರ್ಚೆಗಳೇನು?

bjp
16/12/2021

ಬೆಳಗಾವಿ: ಮತಾಂತರ ನಿಷೇಧ ಮಸೂದೆ ಇದೇ ಅಧಿವೇಶನದಲ್ಲಿ ಮಂಡಿಸುವ ಬಗ್ಗೆ ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಿತು. ಆದರೆ, ಈ ವೇಳೆ ನೇರವಾಗಿ ಮಸೂದೆಯನ್ನು ಮಂಡಿಸುವುದು ಸೂಕ್ತವಲ್ಲ ಎನ್ನುವ ಅಭಿಪ್ರಾಯಗಳು ಬಿಜೆಪಿಯೊಳಗಿಂದಲೇ ಕೇಳಿ ಬಂದಿದೆ ಎನ್ನಲಾಗಿದೆ.

ಈ ವಿಷಯವನ್ನು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಬಿಟ್ಟು ನಂತರ ಮಂಡಿಸುವುದು ಸೂಕ್ತ ಎಂಬ ಅಭಿಪ್ರಾಯ ಕೇಳಿ ಬಂದಿದೆ ಎನ್ನಲಾಗಿದೆ. ಇನ್ನು ಕೆಲವು ಶಾಸಕರು ಚರ್ಚೆ ನಡೆಸುವುದು ಬೇಡ ನೇರವಾಗಿ  ಮಸೂದೆ ಮಂಡಿಸಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಮಸೂದೆ ಮಂಡಿಸುವುದೇ ಆದರೆ, ಮುಂದಿನ ವಾರ ವಿಧಾನಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಈ ಮಸೂದೆಯ ಅಂಗೀಕಾರಕ್ಕೆ ವಿರೋಧ ಪಕ್ಷಗಳು ಅಡ್ಡಿ ಉಂಟು ಮಾಡುವ ಸಾಧ್ಯತೆ ಇದ್ದು, ವಿಧಾನಪರಿಷತ್ತಿನಲ್ಲಿ ಬಹುಮತ ಇಲ್ಲದ ಕಾರಣ ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸುವುದು ಉತ್ತಮ ಎನ್ನುವ ಮಾತುಗಳು ಸಭೆಯಲ್ಲಿ ಕೇಳಿ ಬಂದಿವೆ ಎನ್ನಲಾಗಿದೆ.

ಮತಾಂತರ ನಿಷೇಧ ಮಸೂದೆ ಜಾರಿಯು ಮುಂದಿನ ಚುನಾವಣೆಗೆ ಸಹಕಾರಿಯಾಗಲಿದೆ ಎಂದು ಬಿಜೆಪಿ ಭಾವಿಸಿದೆ ಎನ್ನಲಾಗುತ್ತಿದೆ. ಮತಾಂತರ ನಿಷೇಧ ಕಾಯ್ದೆಯು ಉತ್ತರ ಪ್ರದೇಶ ಸೇರಿದಂತೆ ಇತರ ಎಲ್ಲ ರಾಜ್ಯಗಳಲ್ಲಿಯೂ ಶೇ.100ರಷ್ಟು ವಿಫಲಗೊಂಡಿರುವ ಕಾಯ್ದೆಯಾಗಿದೆ. ಬಲವಂತದ ಮತಾಂತರ ತಡೆಯಲು ಈಗಾಗಲೇ ಪ್ರತ್ಯೇಕ ಕಾನೂನುಗಳಿವೆ. ಆದರೆ, ಬಿಜೆಪಿ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದಾಗಿ ಜನರಿಗೆ ಆರ್ಥಿಕ, ಸಾಮಾಜಿಕ ಹೊರೆಯನ್ನು ಸೃಷ್ಟಿಸಿದ್ದು, ಹೀಗಾಗಿ ಮತಾಂತರ ನಿಷೇಧ ಮಸೂದೆಯಿಂದ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮುಂದಾಗಿದೆ ಎನ್ನುವ ಅಭಿಪ್ರಾಯಗಳು ಕೂಡ ಕೇಳಿ ಬಂದಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಂಗಾಯಣದಲ್ಲಿ ರಾಜಕೀಯ ನಾಟಕ: ಠಾಣೆ ಮೆಟ್ಟಿಲೇರಿದ ರಂಗಾಯಣ-ಪ್ರಗತಿಪರರ ವಿವಾದ

ನನ್ನ ಕ್ಯಾರೆಕ್ಟರ್ ಬಗ್ಗೆ ಹೇಳ್ಬೇಕಂದ್ರೆ, ನೀವು ಟ್ರೈಲರ್ ನೋಡಬೇಕು | ರಶ್ಮಿಕಾ ಮಂದಣ್ಣ

ಬೂದಿ ಮುಚ್ಚಿದ ಕೆಂಡದಂತಿದ್ದ ಉಪ್ಪಿನಂಗಡಿ ಸಹಜ ಸ್ಥಿತಿಯತ್ತ!

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ | ಪ್ರಧಾನಿ ಮೋದಿ ಸಹಿತ ಗಣ್ಯರಿಂದ ಸಂತಾಪ

ಕುಡಿತದ ಮತ್ತಿನಲ್ಲಿ ಅಪ್ರಾಪ್ತ ವಯಸ್ಸಿನ ತನ್ನ ಮಗಳನ್ನೇ ಅತ್ಯಾಚಾರ ನಡೆಸಿದ ತಂದೆ!

ಏಕಾಏಕಿ ಎದ್ದು ನಿಂತು ಅಂಬೇಡ್ಕರ್ ಫೋಟೋ ಯಾಕೆ ಹಾಕಿಲ್ಲ? ಎಂದು ಪ್ರಶ್ನಿಸಿದ ಶಾಸಕ ಅನ್ನದಾನಿ | ಗರಂ ಆದ ಸ್ಪೀಕರ್

ಇತ್ತೀಚಿನ ಸುದ್ದಿ

Exit mobile version