ರೈತರ ಬೇಡಿಕೆ ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹ  | ಇದು ನನ್ನ ಕೊನೆಯ ಉಪವಾಸ | ಕೇಂದ್ರ ಸರ್ಕಾರಕ್ಕೆ ಅಣ್ಣಾ ಹಜಾರೆ ಎಚ್ಚರಿಕೆ - Mahanayaka
10:58 PM Wednesday 11 - September 2024

ರೈತರ ಬೇಡಿಕೆ ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹ  | ಇದು ನನ್ನ ಕೊನೆಯ ಉಪವಾಸ | ಕೇಂದ್ರ ಸರ್ಕಾರಕ್ಕೆ ಅಣ್ಣಾ ಹಜಾರೆ ಎಚ್ಚರಿಕೆ

28/12/2020

ನವದೆಹಲಿ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ್ದು, ಒಂದು ತಿಂಗಳ ಬಳಿಕವು  ಸರ್ಕಾರ ರೈತರ  ಬೇಡಿಕೆಗಳನ್ನು ಈಡೇರಿಸದ್ದಿದ್ದರೆ, ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದು, ಇದು ನನ್ನ ಕೊನೆ ಉಪವಾಸ ಎಂದು ಅವರು ಹೇಳಿದ್ದಾರೆ.

ರಾಲೇಗಣ್ ಸಿದ್ಧಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿರುವ ಅಣ್ಣಾ ಹಜಾರೆ, ಕಳೆದ ಮೂರು ವರ್ಷಗಳಿಂದ ರೈತರ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಇದುವರೆಗೆ ಸರ್ಕಾರ ಸ್ಪಂದಿಸಿಲ್ಲ. ಕೇವಲ ಹುಸಿ ಭರವಸೆಗಳನ್ನಷ್ಟೇ ನೀಡುತ್ತಿದೆ  ಎಂದು  ಸರ್ಕಾರದ ಬಗ್ಗೆಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂ ಎಸ್ ಸ್ವಾಮಿನಾಥನ್ ಸಮಿತಿ ವರದಿಯ ಶಿಫಾರಸುಗಳನ್ನು ಜಾರಿಗೆ ತರಬೇಕು. ಕೃಷಿ ವೆಚ್ಚ ಮತ್ತು ದರ ಆಯೋಗ (ಸಿಎಸಿಪಿ) ಸಂಸ್ಥೆಗೆ ಸ್ವಾಯತ್ತ ಅಧಿಕಾರ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆಯಿಟ್ಟಿರುವ ಹಜಾರೆ, ಈ ನಿಟ್ಟಿನಲ್ಲಿ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಡಿಸೆಂಬರ್ 14ರಂದು ಪತ್ರ ಬರೆದು, ಈ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿದ್ದಾರೆ.


Provided by

ಇತ್ತೀಚಿನ ಸುದ್ದಿ