ಎಂಬಿಬಿಎಸ್ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ!

ಬಾಗಲಕೋಟೆ: ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕೂವರೆ ವರ್ಷ ಎಂಬಿಬಿಎಸ್ ಮುಗಿಸಿ ಇಂಟರ್ಶಿಪ್‍ನಲ್ಲಿದ್ದ ವಿದ್ಯಾರ್ಥಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಂಗಳೂರಿನಲ್ಲಿ ನಡೆದಿದೆ.
ಲಕ್ಷ್ಮೀಪುತ್ರ ಬಿ.ಕುಲಕರ್ಣಿ (24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ರಜೆ ಹಿನ್ನೆಲೆ ಸಂಬಂಧಿಕರ ಜೊತೆಗೆ ತಮಿಳುನಾಡಿಗೆ ಪ್ರವಾಸ ಹೋಗಿದ್ದರು. ಅಲ್ಲಿಂದ ಬರುತ್ತಿದ್ದ ವೇಳೆ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣವೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲೇ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು.
ಲಕ್ಷೀಪುತ್ರ ಮೂಲತಃ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕುಮಸಗಿ ಗ್ರಾಮದವರು. ಮೆಡಿಕಲ್ ಓದಲು ಬಾಗಲಕೋಟೆ ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜ್‍ನಲ್ಲಿ ಪ್ರವೇಶ ಪಡೆದಿದ್ದರು. 2019–20ನೇ ಸಾಲಿನಲ್ಲಿ ಎಂಬಿಬಿಎಸ್ ಪವೇಶ ಪಡೆದು, ಈಗಾಗಲೇ ನಾಲ್ಕೂವರೆ ವರ್ಷ ಅಧ್ಯಯನ ಮುಗಿಸಿ ಸದ್ಯ ಇಂಟರ್ನ್ಶಿಪ್ನಲ್ಲಿ ಇದ್ದರು.
ಇದೇ ಜುಲೈ 10ಕ್ಕೆ ಇಂಟರ್ನ್ಶಿಪ್ ಪೂರ್ಣಗೊಂಡು ವೈದ್ಯಕೀಯ ಸೇವೆಗೆ ಲಕ್ಷ್ಮೀಪುತ್ರ ಕಾಲಿಡಬೇಕಿತ್ತು. ಆದರೆ ಅಷ್ಟರಲ್ಲೇ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಬಾಳಿ ಬದುಕ ಬೇಕಿರುವ ಸಣ್ಣ ವಯಸ್ಸಿನಲ್ಲೇ ಯುವಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇತ್ತೀಚೆಗೆ ನಿರಂತರವಾಗಿ ಹೃದಯಾಘಾತ ಪ್ರಕರಣಗಳು ಸಂಭವಿಸುತ್ತಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: