ಶಾಸಕ ಎಂ.ಸಿ.ಮನಗೊಳಿ ನಿಧನ | ಗಣ್ಯರಿಂದ ಸಂತಾಪ - Mahanayaka

ಶಾಸಕ ಎಂ.ಸಿ.ಮನಗೊಳಿ ನಿಧನ | ಗಣ್ಯರಿಂದ ಸಂತಾಪ

28/01/2021


Provided by

ಬೆಂಗಳೂರು: ಮಾಜಿ ಸಚಿವ, ವಿಜಯಪುರದ ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕ ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಂ.ಸಿ.ಮನಗೊಳಿ ಅವರು ಗುರುವಾರ ಬೆಳಗ್ಗೆ ನಿಧನರಾಗಿದ್ದು,  ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ.

ಎರಡು ಬಾರಿ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಅವರು, ತಮ್ಮ 85ನೇ ವರ್ಷದಲ್ಲಿ ನಿಧನರಾಗಿದ್ದಾರೆ. 1994ರಲ್ಲಿ ಜೆ.ಎಚ್.ಪಟೇಲ್ ಸಂಪುಟದಲ್ಲಿ ಹಾಗೂ 2018ರ ಕುಮಾರಸ್ವಾಮಿ ಸಂಪುಟದಲ್ಲಿ ಮನಗೂಳಿ ಸಚಿವರಾಗಿದ್ದರು.

ಮನಗೂಳಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಲ್ಲಿ ಕೆಲಕಾಲ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಆ ಬಳಿಕ ಸಿಂದಗಿಗೆ ಕೊಂಡೊಯ್ಯಲಾಗುತ್ತದೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ನಾಲ್ವರು ಪುತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ