ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಭೀಕರ ಅಪಘಾತ: ಮೆಡಿಕಲ್ ರೆಪ್ ಬಲಿ

ಶಿವಮೊಗ್ಗ: ರಸ್ತೆಯ ಗುಂಡಿಗೆ ಬಿದ್ದು ಮೆಡಿಕಲ್ ರೆಪ್ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಹೊರವಲಯ ಮಲವಗೊಪ್ಪದಲ್ಲಿ ಸಂಭವಿಸಿದೆ.
ಮಹೇಶ್ ಎಂಬ ಬೈಕ್ ಸವಾರ ರಸ್ತೆ ಗುಂಡಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ. ಇವರು ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದು, ತಮ್ಮ ಎಥರ್ ಎಲೆಕ್ಟ್ರಿಕ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿದ್ದ ಆಳವಾದ ಗುಂಡಿಗೆ ಬೀಳುವುದನ್ನು ತಪ್ಪಿಸಲು ಯತ್ನಿಸಿದ್ದಾರೆ. ಈ ವೇಳೆ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಹೊಂಡಕ್ಕೆ ಬಿದ್ದಿದ್ದಾರೆ.
ಘಟನೆಯಲ್ಲಿ ಮಹೇಶ್ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.
ಘಟನೆಯ ಬೆನ್ನಲ್ಲೇ ಆಸ್ಪತ್ರೆಯ ಆವರಣಕ್ಕೆ ಆಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಮಹೇಶ್ ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ.
ಮಲವಗೋಪ್ಪ ರಸ್ತೆಯಲ್ಲಿ ಹಲವು ಕಡೆಗಳಲ್ಲಿ ಗುಂಡಿಗಳಿವೆ. ಸಾರ್ವಜನಿಕರು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ರಸ್ತೆ ದುರಸ್ತಿ ಮಾಡಿಲ್ಲ. ಇದೀಗ ಬಾಳಿ ಬದುಕಬೇಕಾದ ಯುವಕ ಸಾವನ್ನಪ್ಪಿದ್ದು ಅವರ ಕುಟುಂಬ ಅನಾಥವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD