7:52 AM Wednesday 10 - December 2025

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಕೊಲೆ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆ

20/01/2025

ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಕೋಲ್ಕತ್ತಾದ ಸೀಲ್ಡಾ ನ್ಯಾಯಾಲಯ ಆದೇಶ ಹೊರಡಿಸಿದೆ. ಸಂತ್ರಸ್ತೆಯ ಕುಟುಂಬಸ್ಥರ ಪರ ವಕೀಲರು, ʼಗರಿಷ್ಠ ಶಿಕ್ಷೆಯಾಗಿ ಮರಣದಂಡನೆಯನ್ನು ನಾವು ಬಯಸುತ್ತೇವೆʼ ಎಂದು ಕೋರ್ಟ್ ನಲ್ಲಿ ವಾದಿಸಿದ್ದರು.

ಪಶ್ಚಿಮ ಬಂಗಾಳ ಸರ್ಕಾರದ ಅಧೀನದ ಕೋಲ್ಕತ್ತಾದ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹ ಆಸ್ಪತ್ರೆಯ ಸೆಮಿನಾರ್ ರೂಮ್‌ ನಲ್ಲಿ ಪತ್ತೆಯಾಗಿತ್ತು. ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಆರೋಪಿ ಸಂಜಯ್ ರಾಯ್ ಗೆ ಬಂಧಿಸಲಾಗಿತ್ತು.

ಆರ್ ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈ ಮೊದಲು ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು. ಪಶ್ಚಿಮ ಬಂಗಾಳದ ಸೀಲ್ಡಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಸಿಬಿಐ ಸಂಜಯ್ ರಾಯ್ ಏಕೈಕ ಆರೋಪಿ ಎಂದು ಉಲ್ಲೇಖಿಸಿತ್ತು. ಅಲ್ಲದೆ, ಸಾಮೂಹಿಕ ಅತ್ಯಾಚಾರದ ಸಾಧ್ಯತೆಯನ್ನು ತಳ್ಳಿ ಹಾಕಿತ್ತು.

ತನ್ನ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದ ಸಂಜಯ್ ರಾಯ್, ನಾನು ಅಮಾಯಕನಾಗಿದ್ದು, ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಹೇಳಿದ್ದ. ಆದರೆ ಸೀಲ್ಡಾದ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ಅನಿರ್ಬನ್ ದಾಸ್ ಪ್ರಕರಣದಲ್ಲಿ ಸಂಜಯ್ ರಾಯ್ ದೋಷಿ ಎಂದು ತೀರ್ಪು ನೀಡಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version