ಚರ್ಚ್ ಗೆ ಅಕ್ರಮವಾಗಿ ನುಗ್ಗಿ ಜೈಶ್ರೀರಾಂ ಘೋಷಣೆ: ಕೇಸ್ ಫೈಲ್ - Mahanayaka
5:48 AM Wednesday 20 - August 2025

ಚರ್ಚ್ ಗೆ ಅಕ್ರಮವಾಗಿ ನುಗ್ಗಿ ಜೈಶ್ರೀರಾಂ ಘೋಷಣೆ: ಕೇಸ್ ಫೈಲ್

27/12/2024


Provided by

ಮೇಘಾಲಯದ ಪೂರ್ವ ಕಾಸಿ ಜಿಲ್ಲೆಯ ಚರ್ಚ್‌ಗೆ ಅತಿಕ್ರಮ ಪ್ರವೇಶ ಮಾಡಿ ‘ಜೈ ಶ್ರೀರಾಮ್‌’ ಎಂದು ಕೂಗುವ ಮೂಲಕ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಮೇಘಾಲಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ಮಾವ್ಲಿನ್ನಾಂಗ್ ಗ್ರಾಮದ ಚರ್ಚ್‌ಗೆ ಪ್ರವೇಶಿಸಿದ ವ್ಯಕ್ತಿ ‘ಜೈ ಶ್ರೀರಾಮ್‌’ ಎಂದು ಕೂಗಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.

ಕೃತ್ಯವನ್ನು ಖಂಡಿಸಿರುವ ಮೇಘಾಲಯ ಮುಖ್ಯಮಂತ್ರಿ ಸಿ.ಕೆ.ಸಂಗ್ಮಾ, ‘ಜನರ ಶಾಂತಿ ಮತ್ತು ಸಹಬಾಳ್ವೆಯನ್ನು ಹಾಳುಮಾಡಲು ಉದ್ದೇಶಿಸಿರುವ ವ್ಯಕ್ತಿಯ ವಿರುದ್ದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಕೃತ್ಯವು ಉದ್ದೇಶಪೂರ್ವಕವಾಗಿ ತೋರುತ್ತಿದೆ. ಸಾಮಾಜಿಕ, ಧಾರ್ಮಿಕ ಮತ್ತು ಕೋಮು ಸೌಹಾರ್ದ ಕದಡಲು ಪ್ರಯತ್ನಿಸುವವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ’ ಎಂದು ಹೇಳಿದ್ದಾರೆ..

‘ಇನ್‌ಸ್ಟಾಗ್ರಾಮ್‌ನಲ್ಲಿ ಆಕಾಶ್‌ ಸಾಗರ್‌ ಎಂಬ ಹೆಸರಿರುವ ವ್ಯಕ್ತಿಯ ವಿರುದ್ಧ ಪಿನುರ್ಸಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲು ಹುಡುಕಾಟ ನಡೆಸಲಾಗುತ್ತಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಸಿಲ್ವೆಸ್ಟರ್ ನಾಂಗ್ಟಿಂಗರ್ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ