ಮೇಘನಾ ಫೋಟೋಗೆ ಮೋಜು ಮಸ್ತಿ ಎಂಬ ಟೈಟಲ್: ತಂದೆ ಸುಂದರ್ ರಾಜ್ ಬೇಸರ
ಮೇಘನಾ ರಾಜ್ ಥೈಲ್ಯಾಂಡ್ ಪ್ರವಾಸದ ಚಿತ್ರಗಳಿಗೆ ಮೋಜು, ಮಸ್ತಿ ಎಂಬ ಟೈಟಲ್ ನೀಡಿದ ಮಾಧ್ಯಮಗಳ ಬಗ್ಗೆ ಮೇಘನಾ ತಂದೆ ಸುಂದರ್ ರಾಜ್ ಬೇಸರ ವ್ಯಕ್ತಪಡಿಸಿದ್ದು, ನಾವು ನೋವಿನಿಂದ ಹೊರ ಬರಲು ಪ್ರಯತ್ನಿಸುತ್ತಿದ್ದೇವೆ. ಆದರೆ ಇಂತಹ ಸಂದರ್ಭದಲ್ಲಿ ಈ ರೀತಿಯಾಗಿ ಬರೆದಿರುವುದು ನಮಗೆ ನೋವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ತನ್ನ ಸ್ನೇಹಿತೆಯರ ಜೊತೆಗೆ ಮೇಘನಾ ಥೈಲ್ಯಾಂಡ್ ಗೆ ತೆರಳಿದ್ದರು. ಅಲ್ಲಿನ ಕೆಲವು ಚಿತ್ರಗನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದರು. ಆದರೆ ಈ ಚಿತ್ರಗಳಿಗೆ ತಂದೆ ತಾಯಿಯ ಬಳಿ ಮಗುವನ್ನು ಬಿಟ್ಟು ಮೇಘನಾ ರಾಜ್ ಥೈಲ್ಯಾಂಡ್ ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ ಎಂಬ ಟೈಟಲ್ ನೀಡಿರುವುದು ತೀವ್ರ ನೋವನ್ನುಂಟು ಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಚಿರಂಜೀವಿ ಸರ್ಜಾ ಅಗಲಿಕೆ ಬಳಿಕ ಮೇಘನಾ ರಾಜ್ ನಿಧಾನವಾಗಿ ಕಹಿ ಘಟನೆಯಿಂದ ಹೊರಬಂದಿದ್ದಾರೆ. ಮತ್ತೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಅವರು ಥೈಲ್ಯಾಂಡ್ ಪ್ರವಾಸದಲ್ಲಿದ್ದಾರೆ. ಚಿರುವಿನ ನೆನಪಿನೊಂದಿಗೆ ಜೀವನದಲ್ಲಿ ಹೊಸ ಹೆಜ್ಜೆಯನ್ನು ಇಡಲು ಮೇಘನಾ ಮುಂದಾಗಿದ್ದಾರೆ.
ಆದರೆ, ಈ ನಡುವೆ ಅತ್ಯಂತ ಕೀಳು ಮಟ್ಟದ ಭಾಷೆಯಲ್ಲಿ ಅವರ ಫೋಟೋಗಳಿಗೆ ಶೀರ್ಷಿಕೆ ನೀಡಿರುವ ಕೆಲವು ಮಾಧ್ಯಮಗಳು ಜನರ ಮನಸ್ಸಿನಲ್ಲಿ ಮೇಘನಾ ಕುರಿತು ಕೆಟ್ಟ ಭಾವನೆಯನ್ನು ಮೂಡುವಂತೆ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka