ಅರಣ್ಯ ಹುತಾತ್ಮರ ದಿನಾಚರಣೆ : ಚಾಮರಾಜನಗರದಲ್ಲಿ ಅರಣ್ಯ ಯೋಧರ ಸ್ಮರಣೆ

11/09/2023
ಚಾಮರಾಜನಗರ: ಇಂದು ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅರಣ್ಯ ಸಂರಕ್ಷಣೆಗಾಗಿ ಪ್ರಾಣಬಿಟ್ಟ ಅರಣ್ಯ ಸಿಬ್ಬಂದಿಯನ್ನು ಸ್ಮರಿಸಿತು.
ಚಾಮರಾಜನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾ ನ್ಯಾಯಾಧೀಶೆ ಭಾರತಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸ್ಪಿ ಪದ್ಮಿನಿ ಸಾಹೋ, ಬಿಆರ್ ಟಿ ಡಿಸಿಎಫ್ ದೀಪ್ ಜೆ. ಕಾಂಟ್ರಾಕ್ಟರ್ ಪುಷ್ಪ ನಮನ ಸಲ್ಲಿಸಿದರು.
ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸುವ ಮೂಲಕ ಹುತಾತ್ಮರಿಗೆ ಇದೇ ವೇಳೆ ಗೌರವ ಸಮರ್ಪಣೆ
ಚಾಮರಾಜನಗರ, ಬಂಡಿಪುರ, ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ಧಾಮದಲ್ಲೂ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು. ಒಟ್ಟು ವಿಸ್ತೀರ್ಣದಲ್ಲಿ ಶೇ. 49 ರಷ್ಟು ಅರಣ್ಯಪ್ರದೇಶವನ್ನು ಚಾಮರಾಜನಗರ ಜಿಲ್ಲೆ ಹೊಂದಿದೆ.