ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ಘೋಷಿಸಿದ ಕೇರಳ ಸರ್ಕಾರ - Mahanayaka
7:24 PM Saturday 15 - November 2025

ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ಘೋಷಿಸಿದ ಕೇರಳ ಸರ್ಕಾರ

menstrual leave
21/01/2023

ತಿರುವನಂತಪುರಂ: ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ನೀಡುವುದಾಗಿ ಕೇರಳ ಸರ್ಕಾರವು ಸೋಮವಾರ ಘೋಷಿಸಿದೆ.

ದೇಶದಲ್ಲೇ ಮೊದಲ ಬಾರಿಗೆ ಪಿಣರಾಯಿ ವಿಜಯನ್ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿಯಿಂದ (CUSAT) ತನ್ನ ವಿದ್ಯಾರ್ಥಿಗಳಿಗೆ ಋತುಚಕ್ರದ ರಜೆ ಒದಗಿಸುವ ಸೂಚನೆಯನ್ನು ಶಿಕ್ಷಣ ಸಚಿವರಿಗೆ ನೀಡಲಾಗಿದೆ.

ಕೇರಳ ರಾಜ್ಯದ ಎಲ್ಲಾ ರಾಜ್ಯ ವಿವಿಗಳಲ್ಲಿ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ಘೋಷಿಸಲಾಗಿದೆ.  ಈ ಬಗ್ಗೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿರುವ ಅವರು, ‘ಋತುಸ್ರಾವದ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆಗಳನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚೆಗೆ ಕೊಚ್ಚಿನ್ ವಿವಿ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿರುವ ಅವರು, ಕೇರಳದಲ್ಲಿ ಮೊದಲ ಬಾರಿಗೆ ಶಿಕ್ಷಣ ಕೇಂದ್ರವು ವಿದ್ಯಾರ್ಥಿಗಳಿಗೆ ಋತುಚಕ್ರದ ರಜೆಯನ್ನು ನೀಡಿದೆ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ