ಮಂಗಳೂರಿನ ಲಾಡ್ಜ್ ನಲ್ಲಿ ವ್ಯಾಪಾರಿಯ ಮೃತದೇಹ ಪತ್ತೆ!

ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರು ನಗರದ ಪಂಪ್ ವೆಲ್‌ಎಂಬಲ್ಲಿ ನಡೆದಿದೆ.
ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ(55) ಎಂದು ಗುರುತಿಸಲಾಗಿದೆ. ಮಂಗಳೂರಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದ ಇವರು ಸೋಮವಾರ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ರೂಮ್ ಪಡೆದಿದ್ದರು.
ಇಂದು ಬೆಳಗ್ಗೆ ಮನೆಯವರು ನಿರಂತರ ಮೊಬೈಲ್ ಕರೆ ಮಾಡಿದರೂ ಅಬ್ದುಲ್ ಕರೀಂ ಸ್ವೀಕರಿಸಿಲ್ಲ. ಈ ನಡುವೆ ಕರೀಂ ಪಡೆದಿದ್ದ ಕೊಠಡಿಯಿಂದ ನಿರಂತರ ಮೊಬೈಲ್ ರಿಂಗುಣಿಸುತ್ತಿದ್ದರೂ ಕರೆ ಸ್ವೀಕರಿಸುತ್ತಿಲ್ಲವಾದ್ದರಿಂದ ಸಂಶಯಗೊಂಡು ಲಾಡ್ಜ್ ಸಿಬ್ಬಂದಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳಕ್ಕೆ ಭೇಟಿ ಪರಿಶೀಲಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ಮುಂದುವರಿದಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka