11:32 PM Thursday 16 - October 2025

ಸುರತ್ಕಲ್ ಟೋಲ್ ಪ್ಲಾಜಾ ಹೆಜಮಾಡಿ ಟ್ರೋಲ್ ಗೆ ವಿಲೀನ: ಉಡುಪಿ ತಾಲೂಕು ಆಫೀಸ್ ಸಭಾಂಗಣದಲ್ಲಿ ಚರ್ಚೆ

tollgeat
03/12/2022

ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಟೋಲ್ ಪ್ಲಾಜಾವನ್ನು ತೆರವುಗೊಳಿಸಿ ಅಲ್ಲಿನ ಟೋಲ್ ಶುಲ್ಕವನ್ನು  ಹೆಜಮಾಡಿ ಟೋಲ್ ಗೆ ವಿಲೀನಗೊಳಿಸಿದ್ದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಇಂದು ಉಡುಪಿ ತಾಲೂಕು ಆಫೀಸ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು

ಸಭೆಯಲ್ಲಿ ಸುರತ್ಕಲ್ ಟೋಲ್ ನ್ನು ಹೆಜಮಾಡಿ ಟೋಲ್ ಗೆ ವಿಲೀನಗೊಳಿಸಿದ್ದು ಅವೈಜ್ಞಾನಿಕ ಇದರ ಬಗ್ಗೆ ರಾಜ್ಯ ಮಟ್ಟದಲ್ಲಿ ಸರ್ಕಾರದ ಹಂತದಲ್ಲಿ ಸಭೆ ನಡೆಸಿ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಬಗ್ಗೆ ಚರ್ಚಿಸಲಾಯಿತು.

ಸುರತ್ಕಲ್ ಟೋಲ್ ನಲ್ಲಿ ಸಾರ್ವಜನಿಕ ವಾಹನಗಳಿಗೆ ನೀಡಲಾದ ರಿಯಾಯಿತಿ ಸೌಲಭ್ಯವನ್ನು ಯಥವತ್ತಾಗಿ ಹೆಜಮಾಡಿ ಟೋಲಿಗೆ ಅನುಷ್ಠಾನಗೊಳಿಸುವಂತೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಉಡುಪಿ ಶಾಸಕ‌ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ

Exit mobile version