ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಮೀನಿನ ಲಾರಿ: ವ್ಯಕ್ತಿಯ ದಾರುಣ ಸಾವು - Mahanayaka

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಮೀನಿನ ಲಾರಿ: ವ್ಯಕ್ತಿಯ ದಾರುಣ ಸಾವು

niaz
03/09/2022

ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಕಲ್ಲಾಪು ಮಾರುಕಟ್ಟೆ ಬಳಿ ನಡೆದಿದೆ.

ಮೃತರನ್ನು ಬೆಂಗರೆ ನಿವಾಸಿ ನಿಯಾಝ್ ( 48), ಎಂದು ಗುರುತಿಸಲಾಗಿದೆ. ಕಲ್ಲಾಪು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು  ಕಲ್ಲಾಪುವಿನಲ್ಲಿರುವ ಮನೆಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಮೀನಿನ ಲಾರಿಯೊಂದು ಢಿಕ್ಕಿ ಹೊಡೆದಿದೆ.

ಲಾರಿಯ ಟೈಯರ್ ಸ್ಫೋಟಗೊಂಡು  ಈ ದುರ್ಘಟನೆ ಸಂಭವಿಸಿದೆ. ಬೆಂಗರೆ ನಿವಾಸಿಯಾಗಿದ್ದ ನಿಯಾಝ್ ಕಲ್ಲಾಪುವಿನ ಬಾಡಿಗೆ ಮನೆಗೆ ಬಂದು ನೆಲೆಸಿದ್ದರು. ಈ ಸಂಬಂಧ ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ