ಸಚಿವ ದಿನೇಶ್ ಗುಂಡೂರಾವ್  ಕುಟುಂಬದ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಯತ್ನಾಳ್ ವಿರುದ್ಧ ದೂರು - Mahanayaka

ಸಚಿವ ದಿನೇಶ್ ಗುಂಡೂರಾವ್  ಕುಟುಂಬದ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಯತ್ನಾಳ್ ವಿರುದ್ಧ ದೂರು

yathnal
06/04/2024

ಬೆಂಗಳೂರು:  ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದ್ದಂತೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿಂದಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಯತ್ನಾಳ್ ವಿರುದ್ಧ ದೂರು ದಾಖಲಿಸಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬಸ್ಥರನ್ನು ಅವಮಾನಿಸಿದ್ದಾರೆ. ಚುನಾವಣೆ ಹೊತ್ತಲ್ಲಿ‌ ಕೋಮು ಸೌಹಾರ್ದತೆ ಹಾಳು ಮಾಡಲು ಈ ರೀತಿ ಮಾತಾಡುತ್ತಿದ್ದಾರೆ. ಇದೊಂದು ‌ದೇಶ ವಿರೋಧಿ ಹೇಳಿಕೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್​ ನಲ್ಲಿ ಬಿಜೆಪಿ ಕಾರ್ಯಕರ್ತ ವಿಚಾರಣೆ ನಡೆಸಿದ್ದ ಎನ್​ಐಎ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ