ಬಿಮ್ಸ್ ನಲ್ಲಿ ಬಲಿಯಾದ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಸಚಿವ ಜಮೀರ್ ಘೋಷಣೆ - Mahanayaka

ಬಿಮ್ಸ್ ನಲ್ಲಿ ಬಲಿಯಾದ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಸಚಿವ ಜಮೀರ್ ಘೋಷಣೆ

zameer ahmed
08/12/2024

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ (BIMS)ನಲ್ಲಿ  ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯರ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ.

ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ 2 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆಯಾಗಿದೆ. ಜೊತೆಗೆ 3 ಲಕ್ಷ ರೂ. ಪರಿಹಾರ ಕೊಡುತ್ತೇವೆ ಎಂದು ತಿಳಿಸಿದರು.


ADS

ಬಳ್ಳಾರಿ ಬಿಮ್ಸ್ ನಲ್ಲಿ ಐದು ಮಂದಿ ಬಾಣಂತಿಯರು ಮೃತಪಟ್ಟಿದ್ದಾರೆ. ಇದು ದುರಾದೃಷ್ಟ ಎಂದ ಸಚಿವರು, ಮೃತ ಬಾಣಂತಿಯರೆಲ್ಲರೂ ಬಡ ಕುಟುಂಬದವರು. ಹೀಗಾಗಿ ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ಪರಿಹಾರ ನೀಡುವುದಾಗಿ ತಿಳಿಸಿದರು.

ಔಷಧಿ ತಯಾರಿಕಾ ಕಂಪೆನಿ ವಿರುದ್ಧ ಕ್ರಮ: ಗುಂಡೂರಾವ್

ಇನ್ನೂ  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅಲ್ಲಿ ಏನೆಲ್ಲ ನ್ಯೂನ್ಯತೆಗಳಾಗಿವೆ ಎನ್ನುವುದನ್ನ ತನಿಖೆ ಮಾಡ್ತಾ ಇದ್ದೀವಿ,  ನಮಗೆ ಗೊತ್ತಾಗದೇ ಇನ್ನೆಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ ಗೊತ್ತಿಲ್ಲ. ಔಷಧಿ ತಯಾರಿಸಿದ ಕಂಪೆನಿ ಮೇಲೆ ಕ್ರಮಕೈಗೊಳ್ಳುತ್ತಿದ್ದೇವೆ. ಇನ್ನು ಮುಂದೆ ಇಂತಹ ಘಟನೆಗಳಾಗದಂತೆ ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ