ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ಬೆಳಗಾವಿ: ಕಾರು ಅಪಘಾತಕ್ಕೀಡಾದ ಪರಿಣಾಮ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗಾಯಗೊಂಡ ಘಟನೆ ನಡೆದಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುತ್ತಿದ್ದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಅಪಘಾತಕ್ಕೀಡಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನು ಹಾಗೂ ಮುಖಕ್ಕೆ ಘಟನೆಯಲ್ಲಿ ಗಾಯಗಳಾಗಿವೆ. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಶಾಸಕಾಂಗ ಪಕ್ಷದ ಸಭೆ ಮುಗಿಸಿಕೊಂಡು ತಡರಾತ್ರಿ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಬರುತ್ತಿದ್ದ ವೇಳೆ ಬೆಳಗ್ಗೆ 6 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಯಿಯೊಂದು ರಸ್ತೆಗೆ ಅಡ್ಡ ಬಂದಿದ್ದು, ಅದನ್ನು ತಪ್ಪಿಸುವ ಭರದಲ್ಲಿ ಮರವೊಂದಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7