ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ

ಮೈಸೂರು: ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ವ್ಯಾಕರಣ, ಪದಗಳನ್ನಷ್ಟೇ ಬದಲಾವಣೆ ಮಾಡಲಾಗಿದೆ. ಅಂದರೆ, ತಪ್ಪಿದ್ದನ್ನು ಸರಿ ಮಾಡಲಾಗಿದೆ. ಅದಕ್ಕಾಗಿ ಒಂದು ಪುಟ ಬದಲಾವಣೆ ಮಾಡಲಾಗಿದೆ. ಅದು ಬಿಟ್ಟರೆ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಅವರು ತಿಳಿಸಿದರು.
ಈ ಹಿಂದೆ ಬಿಜೆಪಿ ಪಕ್ಷ ಪ್ರತಿಕಾರದ ಮಾದರಿಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿರುವ ಬಗ್ಗೆ ರಾಜ್ಯದಲ್ಲಿ ಕೋಲಾಹಲವೇ ಸೃಷ್ಟಿ ಮಾಡಿತ್ತು. ಹೀಗಾಗಿ ಈ ತಪ್ಪುಗಳನ್ನು ಕಾಂಗ್ರೆಸ್ ಸರ್ಕಾರ ಸರಿಪಡಿಸಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ, ಈ ಬಾರಿ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ ಎನ್ನುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಪಠ್ಯ ಪುಸ್ತಕ — ಸಮವಸ್ತ್ರ ವಿತರಣೆ:
ಶಾಲಾ ಮಕ್ಕಳ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಶೇ.95 ರಷ್ಟು ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಗಿದೆ. ಈ ತಿಂಗಳ ಒಳಗೆ ಶೇ.100 ವಿತರಣೆ ಮಾಡುತ್ತೇವೆ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068