ದಲಿತರ ಬಗ್ಗೆ ಹಗುರವಾಗಿ ಮಾತನಾಡಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ರಾಜೀನಾಮೆ ನೀಡಲಿ: ಮಾಜಿ ಸಚಿವ ಎನ್.ಮಹೇಶ್ ಆಗ್ರಹ

n mahesh
16/08/2023

ಚಾಮರಾಜನಗರ: ದಲಿತರ ಕುರಿತು ಹಗುರವಾಗಿ ಮಾತಾಡಿರುವ ಎಸ್.ಎಸ್. ಮಲ್ಲಿಕಾರ್ಜುನ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎನ್.ಮಹೇಶ್ ಆಗ್ರಹಿಸಿದ್ದಾರೆ.

ಸಂವಿಧಾನದ ಮೇಲೆ ನಂಬಿಕೆ ಇದ್ದರೆ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ, ದಲಿತರಾಮಯ್ಯ ಎಂದು ಕರೆಸಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಸಮಸ್ಯೆಯನ್ನ ಗಂಭೀರವಾಗಿ ಪರಿಗಣಿಸಬೇಕು, ದಲಿತರ ಕುರಿತು ಹಗುರವಾಗಿ ಮಾತಾಡೋರಿಗೆ ಪಾಠವಾಗಬೇಕು ಎಂದು ಎನ್.ಮಹೇಶ್ ಒತ್ತಾಯಿಸಿದ್ದಾರೆ.

ನಾನು ಹೊಲೆಯ ಅಂತ ಹೇಳಿಕೊಳ್ಳೋಕೆ ಹೆಮ್ಮೆ ಆಗುತ್ತೆ, ನಾವು ಈ ದೇಶದ ಮೂಲ ನಿವಾಸಿಗಳು. ಅಸ್ಪೃಶ್ಯ ಸಮುದಾಯದ ನಾವು ಯಾರ ಮೇಲೂ ದಬ್ಬಾಳಿಕೆ, ದೌರ್ಜನ್ಯ ಮಾಡಿಲ್ಲ, ಪ್ರಾಮಾಣಿಕವಾಗಿ ದುಡಿದು ಬದುಕುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಜಾತಿ ಆಧಾರದ ಮೇಲೆ ಯಾರನ್ನೂ ಕೀಳಾಗಿ ಕಂಡಿಲ್ಲ, ಎಸ್.ಎಸ್. ಮಲ್ಲಿಕಾರ್ಜುನ ಅವ್ರಿಗೆ ಸಂವಿಧಾನದ ಮೇಲೆ ನಂಬಿಕೆಯಿದ್ದರೆ ಕೂಡಲೇ ಸಚಿವ ಸ್ಥಾ‌ನಕ್ಕೆ ರಾಜೀನಾಮೆ ನೀಡಲಿ ಎಂದು ಎನ್.ಮಹೇಶ್ ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ:

n mahesh

ಇತ್ತೀಚಿನ ಸುದ್ದಿ

Exit mobile version