ಚಾಮರಾಜನಗದಲ್ಲಿ ಸಚಿವ ಸೋಮಣ್ಣ ಧ್ವಜಾರೋಹಣ: ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ

chamaraj nagara
26/01/2023

ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ 74ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಧ್ವಜಾರೋಹಣ ಮಾಡಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಪೊಲೀಸ್, ಅಬಕಾರಿ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ತುಕಡಿಗಳು ಆಕರ್ಷಕ ಪಥ ಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿದರು. ಬಳಿಕ, ಗಣರಾಜ್ಯೋತ್ಸವದ ಸಂದೇಶ ಹಂಚಿಕೊಂಡ ಸೋಮಣ್ಣ, ಕರ್ನಾಟಕಸ ಪಾಲಿಗೆ ಅಭಿವೃದ್ಧಿಯಲ್ಲಿ ಸುವರ್ಣ ಯುಗ ಆರಂಭಗೊಂಡಿದೆ, ನಮ್ಮ ಸರ್ಕಾರದ ಯೋಜನೆ, ಕಾರ್ಯಕ್ರಮಗಳು ಕರ್ನಾಟಕದ ಚಿತ್ರಣ ಬದಲಿಸಿದೆ ಎಂದರು.

ಗಡಿಜಿಲ್ಲೆ ಚಾಮರಾಜನಗರ ಸರ್ವತೋಮುಖ ಅಭಿವೃದ್ಧಿಗೆ ನಮ ಸರ್ಕಾರ ಕಟಿಬದ್ಧವಾಗಿದೆ, ಬಲಿಷ್ಠ ಭಾರತದ ನಿರ್ಮಾಣದ ಸಂಕಲ್ಪ ತೊಟ್ಟು ದಿನದ 24 ಗಂಟೆ ಪ್ರಜಾ ಸೇವಕನಂತೆ ದುಡಿಯುತ್ತಿರುವ ಪ್ರಧಾನಿ ಮೋದಿ ಕೈ ಬಲಪಡಿಸುವ ಜೊತೆಗೆ ಶಕ್ತಿಶಾಲಿ ಕರ್ನಾಟಕದ ನಿರ್ಮಾಣಕ್ಕೆ ಪ್ರತಿಜ್ಞೆ ಮಾಡೋಣ ಎಂದರು.

ಇನ್ನು, ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ಚಾಮರಾಜನಗರ ಜಿಲ್ಲಾಡಳಿತ ಭವನ ಆವರಣದಲ್ಲಿ ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version